
ಅಗ್ನಿ ಅವಘಡ
ಹೈದರಾಬಾದ್ ನ ಹೋಟೆಲ್ ನಲ್ಲಿ ಬೃಹತ್ ಅಗ್ನಿ ಅವಘಡ ಸಂಭವಿಸಿದ್ದು, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.
ನಲಗೊಂಡ ಎಕ್ಸ್ ರಸ್ತೆಯಲ್ಲಿರುವ ಸೊಹೈಲ್ ಹೊಟೆಲ್ ನಲ್ಲಿ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ದಟ್ಟವಾದ ಹೊಗೆಯ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದು, ಸೂಕ್ತ ಸಮಯದಲ್ಲಿ ಆತನನ್ನು ರಕ್ಷಿಸಲು ಸಾಧ್ಯವಾಗಲಿಲ್ಲ.
ಅಗ್ನಿ ಅವಘಡಕ್ಕೆ ಇನ್ನಷ್ಟೇ ಕಾರಣ ತಿಳಿಯಬೇಕಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ ಹೋಟೆಲ್ ನಿಯಮಗಳನ್ನು ಪಾಲನೆ ಮಾಡುತ್ತಿರಲಿಲ್ಲ. ಸಹಾಯಕ ಪೊಲೀಸ್ ಆಯುಕ್ತ ಪಿ ದೇವೇಂದ್ರ ಈ ಬಗ್ಗೆ ಮಾಹಿತಿ ನೀಡಿದ್ದಾರೆ.