ಜೋಶಿಮಠದಲ್ಲಿ ಸಿಲುಕಿರುವ ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವುದು ಮೊದಲ ಆದ್ಯತೆ: ಉತ್ತರಾಖಂಡ ಸಿಎಂ
ಜೋಶಿಮಠದಲ್ಲಿ ಭೂಕುಸಿತ ಉಂಟಾಗಿದ್ದು, 600 ಕುಟುಂಬಗಳ ಅಸ್ತಿತ್ವಕ್ಕೆ ಧಕ್ಕೆ ಉಂಟಾಗಿದೆ. ಇನ್ನು ಇಲ್ಲಿ ಸಿಲುಕಿರುವ ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವುದು ನಮ್ಮ ಮೊದಲ ಆದ್ಯತೆ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.
Published: 07th January 2023 08:18 PM | Last Updated: 07th January 2023 08:18 PM | A+A A-

ಪುಷ್ಕರ್ ಸಿಂಗ್ ಧಾಮಿ
ಜೋಶಿಮಠ(ಉತ್ತರಾಖಂಡ): ಜೋಶಿಮಠದಲ್ಲಿ ಭೂಕುಸಿತ ಉಂಟಾಗಿದ್ದು, 600 ಕುಟುಂಬಗಳ ಅಸ್ತಿತ್ವಕ್ಕೆ ಧಕ್ಕೆ ಉಂಟಾಗಿದೆ. ಇನ್ನು ಇಲ್ಲಿ ಸಿಲುಕಿರುವ ಕುಟುಂಬಗಳನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸುವುದು ನಮ್ಮ ಮೊದಲ ಆದ್ಯತೆ ಎಂದು ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿಎಂ ಧಾಮಿ ಇಂದು ಜೋಶಿಮಠಕ್ಕೆ ಬಂದು ಪರಿಸ್ಥಿತಿಯನ್ನು ಅವಲೋಕಿಸಿದರು. ನಂತರ ರಕ್ಷಣಾ ಕಾರ್ಯಾಚರಣೆಯನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು ಅಗತ್ಯಬಿದ್ದರೆ ಏರ್ ಲಿಫ್ಟ್ ಮಾಡಲು ಆದೇಶಿಸಿದರು.
ಮುಖ್ಯಮಂತ್ರಿ ಧಾಮಿ ಇಂದು ನರಸಿಂಗ್ ದೇವಸ್ಥಾನ ಮತ್ತು ಮಾರ್ವಾಡಿ ಪ್ರದೇಶಕ್ಕೆ ಭೇಟಿ ನೀಡಿದರು. ಸಂತ್ರಸ್ತ ಕುಟುಂಬಗಳನ್ನು ಸಿಎಂ ಧಾಮಿ ಭೇಟಿ ಮಾಡಿದ್ದು ಸರ್ಕಾರದಿಂದ ಸಾಧ್ಯವಿರುವ ಎಲ್ಲ ನೆರವು ನೀಡುವುದಾಗಿ ಭರವಸೆ ನೀಡಿದರು. ಎಲ್ಲರನ್ನೂ ರಕ್ಷಿಸಿ ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯುವಂತೆ ಮುಖ್ಯಮಂತ್ರಿ ಆದೇಶ ನೀಡಿದ್ದರಿಂದ ಇಂದು ಸಂಜೆಯಿಂದಲೇ ರಕ್ಷಣಾ ಕಾರ್ಯಾಚರಣೆ ದೊಡ್ಡ ಮಟ್ಟದಲ್ಲಿ ಆರಂಭವಾಗಿದೆ. ಅಧಿಕಾರಿಗಳ ಪ್ರಕಾರ, ಇದುವರೆಗೆ 100ಕ್ಕೂ ಹೆಚ್ಚು ಕುಟುಂಬಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಇದನ್ನೂ ಓದಿ: ಕುಸಿಯುತ್ತಿದೆ ಜೋಶಿಮಠ: ಎಚ್ಚರಿಕೆ ನಿರ್ಲಕ್ಷಿಸಿದ ಉತ್ತರಾಖಂಡ ಸರ್ಕಾರದ ವಿರುದ್ಧ ತೀವ್ರ ಜನಾಕ್ರೋಶ
ಜೋಶಿಮಠದಲ್ಲಿ ಮೊಕ್ಕಾಂ ಹೂಡಿರುವ ಗಡ್ವಾಲ್ ರೇಂಜ್‌ನ ಕಮಿಷನರ್ ಮತ್ತು ಇತರ ಅಧಿಕಾರಿಗಳನ್ನು ಮುಖ್ಯಮಂತ್ರಿ ಧಾಮಿ ಭೇಟಿಯಾಗಿ ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿದರು. ನಂತರ ಏಕಕಾಲದಲ್ಲಿ ಜನರನ್ನು ವಿಮಾನದಲ್ಲಿ ಸಾಗಿಸಲು ಹೆಲಿಕಾಪ್ಟರ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಸೂಚನೆಗಳನ್ನು ನೀಡಿದರು.
ಜೋಶಿಮಠದಲ್ಲಿ ಭೂಕುಸಿತ ಉಂಟಾಗಿದ್ದು, 600ಕ್ಕೂ ಹೆಚ್ಚು ಕುಟುಂಬಗಳ ಜೀವ ಅಪಾಯದಲ್ಲಿದೆ. ಜನರನ್ನು ಸುರಕ್ಷಿತ ಸ್ಥಳಗಳಿಗೆ ಪುನರ್ವಸತಿ ಕಲ್ಪಿಸುವ ಕಾರ್ಯವನ್ನು ತೀವ್ರಗೊಳಿಸಲಾಗಿದೆ. ಗೋಡೆಗಳ ಬಿರುಕುಗಳಿಂದ ಹಲವು ಮನೆಗಳು, ದೇವಸ್ಥಾನಗಳು ಕುಸಿದಿವೆ.