ಮೈತ್ರಿ ಮಾತಿನ ನಡುವೆ ಚಂದ್ರಬಾಬು ನಾಯ್ಡು ಭೇಟಿಯಾದ ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್
ಆಂಧ್ರ ಪ್ರದೇಶದಲ್ಲಿ ಟಿಡಿಪಿ ಹಾಗೂ ಜನಸೇನಾ ಮೈತ್ರಿ ವದಂತಿ ಹಬ್ಬಿರುವಂತೆಯೇ, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಭಾನುವಾರ ತೆಲುಗು ದೇಶಂ ಪಾರ್ಟಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.
Published: 08th January 2023 04:07 PM | Last Updated: 08th January 2023 04:51 PM | A+A A-

ಚಂದ್ರಬಾಬು ನಾಯ್ಡು ಭೇಟಿಯಾದ ಪವನ್ ಕಲ್ಯಾಣ್
ಅಮರಾವತಿ: ಆಂಧ್ರ ಪ್ರದೇಶದಲ್ಲಿ ಟಿಡಿಪಿ ಹಾಗೂ ಜನಸೇನಾ ಮೈತ್ರಿ ವದಂತಿ ಹಬ್ಬಿರುವಂತೆಯೇ, ಜನಸೇನಾ ಮುಖ್ಯಸ್ಥ ಪವನ್ ಕಲ್ಯಾಣ್ ಭಾನುವಾರ ತೆಲುಗು ದೇಶಂ ಪಾರ್ಟಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಮುಂದಿನ ವರ್ಷ ನಡೆಯಲಿರುವ ಆಂಧ್ರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ರಾಜಕೀಯ ಎದುರಾಳಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರನ್ನು ಸೋಲಿಸಲು ಪಣ ತೊಟ್ಟಿರುವ ಪವನ್ ಕಲ್ಯಾಣ್, ಪ್ರತಿಪಕ್ಷಗಳ ಮತಗಳು ಚದುರದಂತೆ ಕಾರ್ಯತಂತ್ರ ರೂಪಿಸುತ್ತಿದ್ದಾರೆ.
ಇದನ್ನೂ ಓದಿ: ವೈಎಸ್ ಆರ್ ಸಿಪಿಗೆ ಎಚ್ಚರಿಕೆ ನೀಡಲು ವೇದಿಕೆ ಮೇಲೆ ಚಪ್ಪಲಿ ತೋರಿಸಿದ ಜನಸೇನಾ ನಾಯಕ ಪವನ್ ಕಲ್ಯಾಣ್
ಚಂದ್ರಬಾಬು ನಾಯ್ಡು ಅವರ ಜುಬಿಲಿ ಹಿಲ್ಸ್ ನಲ್ಲಿನ ಉಭಯ ಪಕ್ಷಗಳ ಮುಖಂಡರು ಭೇಟಿಯಾಗಿದ್ದು, ಹಲವು ವರ್ಷಗಳ ಬಳಿಕ ಮೊದಲ ಬಾರಿಗೆ ಔಪಚಾರಿಕವಾಗಿ ಮಾತುಕತೆ ನಡೆಸಿದ್ದಾರೆ. ಪ್ರಸ್ತುತ ಜನಸೇನಾ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರೆ ಟಿಡಿಪಿ 2018ರಿಂದ ಬಿಜೆಪಿಯೊಂದಿಗೆ ಸಖ್ಯ ತೊರೆದು ಏಕಾಂಗಿಯಾಗಿದೆ.
#Janasena party chief @PawanKalyan calls on #TDP chief @ncbn at latter's residence in #Hyderabad on #Sunday. Meeting attains significance in wake of reports of possible alliance between the two parties @NewIndianXpress pic.twitter.com/7RMIae6sED
— TNIE Andhra Pradesh (@xpressandhra) January 8, 2023
ಕಳೆದ ವರ್ಷ ಅಕ್ಟೋಬರ್ ನಲ್ಲಿ ವಿಜಯವಾಡದಲ್ಲಿ ಟಿಡಿಪಿ ಅಧ್ಯಕ್ಷ ಚಂದ್ರಬಾಬು ನಾಯ್ಡು ಪವನ್ ಕಲ್ಯಾಣ್ ಅವರನ್ನು ಭೇಟಿ ಮಾಡಿದ್ದರು. ಅಲ್ಲಿಂದಾಚೆಗೆ ಇಲ್ಲಿಯವರೆಗೂ ಉಭಯ ನಾಯಕರ ನಡುವೆ ಯಾವುದೇ ಭೇಟಿ ಆಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಚಂದ್ರಬಾಬು ನಾಯ್ಡು ಮತ್ತು ಪವನ್ ಕಲ್ಯಾಣ್ ಅವರ ಭೇಟಿ ಮಹತ್ವದ್ದಾಗಿದೆ.