1993 ರ ಮಾದರಿಯ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿ ಬಂಧನ

ಮುಂಬೈ ಪೊಲೀಸರಿಗೆ ಕರೆ ಮಾಡಿ, 1993 ಮಾದರಿಯ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. 
ಆರೋಪಿ ಬಂಧನ (ಸಾಂದರ್ಭಿಕ ಚಿತ್ರ)
ಆರೋಪಿ ಬಂಧನ (ಸಾಂದರ್ಭಿಕ ಚಿತ್ರ)

ನವದೆಹಲಿ: ಮುಂಬೈ ಪೊಲೀಸರಿಗೆ ಕರೆ ಮಾಡಿ, 1993 ಮಾದರಿಯ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. 

ಮಹಾರಾಷ್ಟ್ರ ಭಯೋತ್ಪಾದಕ ನಿಗ್ರಹ ದಳ ಹಿಸ್ಟರಿ ಶೀಟರ್ ನ್ನು ಬಂಧಿಸಿದ್ದು, ಬಂಧನಕ್ಕೂ 24 ಗಂಟೆಗಳ ಮುನ್ನ ಆತ 1993 ರ ಮಾದರಿಯಲ್ಲಿ ಬಾಂಬ್ ಸ್ಫೋಟದ ಬೆದರಿಕೆ ಹಾಕಿದ್ದ. 

ಶನಿವಾರದಂದು ಸಂಜೆ ಅನಾಮಧೇಯ ವ್ಯಕ್ತಿಯಿಂದ ಕರೆ ಬಂದಿತ್ತು, ಕರೆ ಮಾಡಿದ್ದ ವ್ಯಕ್ತಿ ಮಹಿಮ್ ಭೆಂಡಿ ಬಜಾರ್, ನಾಗ್ಪಾದ, ಮದನ್ಪುರ ಹಾಗೂ ಇನ್ನಿತರ ಪ್ರದೇಶಗಳಲ್ಲಿ 2 ತಿಂಗಳ ಬಳಿಕ ಸರಣಿ ಸ್ಫೋಟ ಸಂಭವಿಸಲಿದೆ ಎಂದು ಹೇಳಿದ್ದ. 

ಇನ್ನು ರಾಜ್ಯದಲ್ಲಿ ಕೋಮು ದಂಗೆ ಎಬ್ಬಿಸುವುದಕ್ಕಾಗಿ ಮುಂಬೈ ಗೆ ಬೇರೆ ಬೇರೆ ರಾಜ್ಯಗಳಿಂದ ಜನರನ್ನು ಕರೆತರಲಾಗಿದೆ ಎಂದು ಕರೆ ಮಾಡಿದ್ದ ವ್ಯಕ್ತಿ ಹೇಳಿದ್ದಾಗಿ ಎಟಿಎಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಕರೆ ಮಾಡಿದ್ದ ವ್ಯಕ್ತಿಯನ್ನು ಪತ್ತೆ ಮಾಡುವುದಕ್ಕಾಗಿ ಎಟಿಎಸ್ 2 ವಿಶೇಷ ತಂಡಗಳನ್ನು ರಚಿಸಿತ್ತು,  ಮಲದ್ ನ ಪ್ರದೇಶದಲ್ಲಿ ಆತನನ್ನು ಪತ್ತೆ ಮಾಡಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿ ವಿರುದ್ಧ ಈಗಾಗಲೇ ಹಲವು ಅಪರಾಧದ ಪ್ರಕರಣಗಳಿದ್ದು ದರೋಡೆ, ಲೈಂಗಿಕ ಕಿರುಕುಳ, ಭೂ ಕಬಳಿಕೆ ಸೇರಿದಂತೆ ವಿವಿಧ 12 ಪ್ರಕರಣಗಳು ದಾಖಲಾಗಿವೆ. ಬಾಂಬ್ ಬೆದರಿಕೆ ಕರೆ ಮಾಡಿದ್ದ ವ್ಯಕ್ತಿ ವಿರುದ್ಧ 505-I  ಸೇರಿದಂತೆ ಹಲವು ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com