ರಜೌರಿ ಉಗ್ರರ ದಾಳಿ ಪ್ರಕರಣ: ಮತ್ತೊಬ್ಬ ನಾಗರೀಕ ಸಾವು, ಮೃತರ ಸಂಖ್ಯೆ 7ಕ್ಕೆ ಏರಿಕೆ
ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಹೊಸ ವರ್ಷದ ದಿನದಂದೇ ಉಗ್ರರು ನಡೆಸಿದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಭಾನುವಾರ ತಿಳಿದುಬಂದಿದೆ.
Published: 08th January 2023 12:05 PM | Last Updated: 09th January 2023 02:19 PM | A+A A-

ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಹೊಸ ವರ್ಷದ ದಿನದಂದೇ ಉಗ್ರರು ನಡೆಸಿದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ ಎಂದು ಭಾನುವಾರ ತಿಳಿದುಬಂದಿದೆ.
ರಜೌರಿಯ ಡ್ಯಾಂಗ್ರಿ ಪ್ರದೇಶದಲ್ಲಿ 3 ಮನೆಗಳ ಮೇಲೆ ದಾಳಿ ಉಗ್ರರು ಜನವರಿ 1 ರಂದು ದಾಳಿ ನಡೆಸಿದ್ದರು. ಈ ವೇಳೆ ಮೂವರು ಸ್ಥಳದಲ್ಲಿಯೇ ಸಾವ್ನಪ್ಪಿದ್ದರು.
ಬಳಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮೂವರು ಸಾವನ್ನಪ್ಪಿದ್ದರು. ಇದೀಗ ಮತ್ತೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಘಟನೆ ಸಂಬಂಧ 7 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿದ್ದರು. ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸುತ್ತಿದ್ದಂತೆಯೇ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದರು.