ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಹೇಳಿಕೆ; ಸಮಾಜವಾದಿ ಪಕ್ಷದ ನಾಯಕನ ಬಂಧನ

ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ಪದಾಧಿಕಾರಿಯನ್ನು ಭಾನುವಾರ ಇಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಲಖನೌ: ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಸಮಾಜವಾದಿ ಪಕ್ಷದ ಪದಾಧಿಕಾರಿಯನ್ನು ಭಾನುವಾರ ಇಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮನೀಶ್ ಜಗನ್ ಅಗರ್ವಾಲ್ ಅವರ ಬಂಧನದಿಂದ ಕೋಪಗೊಂಡ ಸಮಾಜವಾದಿ ಪಕ್ಷದ ಕಾರ್ಯಕರ್ತರು ಉತ್ತರ ಪ್ರದೇಶ ಪೊಲೀಸ್ ಪ್ರಧಾನ ಕಚೇರಿಯ ಹೊರಗೆ ಜಮಾಯಿಸಿ, ಅವರನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

ಅಗರ್ವಾಲ್ ಪಕ್ಷದ ಸಾಮಾಜಿಕ ಮಾಧ್ಯಮ ಕೋಶದೊಂದಿಗೆ ಸಂಬಂಧ ಹೊಂದಿದ್ದಾರೆ ಎಂದು ಎಸ್ಪಿ ನಾಯಕ ಮತ್ತು ಉತ್ತರ ಪ್ರದೇಶ ವಿಧಾನ ಪರಿಷತ್ತಿನ ಮಾಜಿ ವಿರೋಧ ಪಕ್ಷದ ನಾಯಕ ಸುನಿಲ್ ಲಾಥರ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಕೂಡ ಸ್ಥಳಕ್ಕೆ ಆಗಮಿಸಿದ್ದಾರೆ.

ಹಜರತ್‌ಗಂಜ್‌ನ ಸಹಾಯಕ ಕಮಿಷನರ್ ಅರವಿಂದ್ ಕುಮಾರ್ ವರ್ಮಾ ಅವರು ಪಿಟಿಐ ಜೊತೆಗೆ ಮಾತನಾಡಿ, 'ಸಾಮಾಜಿಕ ಮಾಧ್ಯಮದಲ್ಲಿ ಅಸಭ್ಯ ಮತ್ತು ಅವಹೇಳನಕಾರಿ ಹೇಳಿಕೆಗಳಿಗಾಗಿ ಮನೀಶ್ ಜಗನ್ ಅಗರ್‌ವಾಲ್ ಅವರನ್ನು ಬಂಧಿಸಲಾಗಿದೆ ಎಂದಿದ್ದಾರೆ.

ಭಾನುವಾರ ಬೆಳಗ್ಗೆ ಅವರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಜನವರಿ 4ರಂದು ಐಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com