ತಮಿಳುನಾಡು: ಬೈಕ್‌ಗೆ ಡಿಕ್ಕಿಯಾದ ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆ ಬಸ್, ಇಬ್ಬರು ಸಾವು
ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ. ಕರ್ನಾಟಕ ಗಡಿಭಾಗದ ಕೃಷ್ಣಗಿರಿಯಲ್ಲಿ ಭಾನುವಾರ ಈ ಘಟನೆ ನಡೆದಿದೆ.
Published: 08th January 2023 04:19 PM | Last Updated: 08th January 2023 04:24 PM | A+A A-

ಸಾಂದರ್ಭಿಕ ಚಿತ್ರ
ಚೆನ್ನೈ: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವಿಗೀಡಾಗಿದ್ದಾರೆ. ಕರ್ನಾಟಕ ಗಡಿಭಾಗದ ಕೃಷ್ಣಗಿರಿಯಲ್ಲಿ ಭಾನುವಾರ ಈ ಘಟನೆ ನಡೆದಿದೆ.
ದ್ವಿಚಕ್ರ ವಾಹನಕ್ಕೆ ಗುದ್ದಿದ ಕರ್ನಾಟಕ ಸಾರಿಗೆ ಬಸ್‌ಗೆ ಬೆಂಕಿ ತಗುಲಿದ್ದು, ಸಂಪೂರ್ಣ ಸುಟ್ಟು ಕರಕಲಾಗಿದೆ. ಆದರೆ, ಬಸ್‌ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ತಿರುವಿನಲ್ಲಿ ಬೈಕ್ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದಿದೆ ಎಂದು ಮೂಲಗಳು ಐಎಎನ್‌ಎಸ್‌ಗೆ ತಿಳಿಸಿವೆ. ಅಪಘಾತದ ನಂತರ ಬಸ್‌ಗೆ ಬೆಂಕಿ ಹೊತ್ತಿಕೊಂಡಿದ್ದು, ಪ್ರಯಾಣಿಕರು ಸುರಕ್ಷಿತವಾಗಿ ಹೊರಗೆ ಹಾರಿದ್ದಾರೆ.
ಅಪಘಾತದಲ್ಲಿ ಸಾವಿಗೀಡಾದ ವ್ಯಕ್ತಿಗಳ ವಿವರಗಳನ್ನು ಪೊಲೀಸರು ಇದುವರೆಗೆ ಖಚಿತಪಡಿಸಿಲ್ಲ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕೃಷ್ಣಗಿರಿ ಸರ್ಕಾರಿ ಆಸ್ಪತ್ರೆಯಲ್ಲಿ ಇಡಲಾಗಿದೆ.