
ರಾಕೇಶ್ ಟಿಕಾಯತ್
ಕುರುಕ್ಷೇತ್ರ: ಬಿಕೆಯು ಮುಖಂಡ ರಾಕೇಶ್ ಟಿಕಾಯತ್ ಸೇರಿದಂತೆ ರೈತರ ನಿಯೋಗ ಸೋಮವಾರ ಹರಿಯಾಣದ ಕುರುಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದೆ.
ಭಾರತ್ ಜೋಡೋ ಯಾತ್ರೆಯ ನೇತೃತ್ವ ವಹಿಸಿರುವ ರಾಹುಲ್ ಗಾಂಧಿ ಅವರನ್ನು ರಾಕೇಶ್ ಟಿಕಾಯತ್ ಅವರು ಭೇಟಿ ಚರ್ಚಿಸಿದರು.
ಈ ಹಿಂದೆ ಭಾರತ್ ಜೋಡೋ ಯಾತ್ರೆ ಉತ್ತರ ಪ್ರದೇಶದ ಮೂಲಕ ಹಾದು ಹೋಗುತ್ತಿದ್ದಾಗ ಯಾತ್ರೆಯಲ್ಲಿ ಭಾಗವಹಿಸುವಂತೆ ರಾಕೇಶ್ ಟಿಕಾಯತ್ ಅವರಿಗೆ ಕಾಂಗ್ರೆಸ್ ಆಹ್ವಾನ ನೀಡಿತ್ತು. ಆದರೆ, ರಾಕೇಶ್ ಟಿಕಾಯತ್ ಯಾತ್ರೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದರು.
ಇದನ್ನು ಓದಿ: ಭಯ, ದ್ವೇಷ - ನಿರುದ್ಯೋಗ, ಹಣದುಬ್ಬರದ ವಿರುದ್ಧ ಭಾರತ್ ಜೋಡೋ ಯಾತ್ರೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ
ಬಿಕೆಯು ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಅವರು ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದಾರೆ. ರಾಹುಲ್ ಗಾಂಧಿ ಅವರ ಯಾತ್ರೆಯಲ್ಲಿ ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ಕಾರ್ಯಕರ್ತರು ಭಾಗವಹಿಸಲು ಮುಕ್ತರಾಗಿದ್ದಾರೆ. ಆದರೆ ಜಿಲ್ಲಾ ಅಧ್ಯಕ್ಷರ ಶ್ರೇಣಿಗಿಂತ ಹೆಚ್ಚಿನ ಹುದ್ದೆ ಹೊಂದಿರುವವರು ಅದರಲ್ಲಿ ಭಾಗವಹಿಸುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದರು.