ಕಾಶ್ಮೀರ, ಪಂಜಾಬ್ ನಲ್ಲಿ ಭಾರತ್ ಜೋಡೋ ಯಾತ್ರೆ ವೇಳೆ ರಾಹುಲ್ ಗಾಂಧಿ ಭದ್ರತೆ ಹೆಚ್ಚಳ

ಕಾಂಗ್ರೆನ್ ನ ಭಾರತ್ ಜೋಡೋ ಯಾತ್ರೆ ಈ ತಿಂಗಳು ಪಂಜಾಬ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಲಿದ್ದು, ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಭದ್ರತೆಯನ್ನು ಬಿಗಿಗೊಳಿಸಲು ಭದ್ರತಾ ಸಂಸ್ಥೆಗಳು ಸಿದ್ಧತೆ ನಡೆಸಿವೆ.
ಭಾರತ್ ಜೋಡೋ ಯಾತ್ರೆಯ ವೇಳೆ ಬೆಂಬಲಿಗರತ್ತ ಕೈಬೀಸಿದ ರಾಹುಲ್ ಗಾಂಧಿ
ಭಾರತ್ ಜೋಡೋ ಯಾತ್ರೆಯ ವೇಳೆ ಬೆಂಬಲಿಗರತ್ತ ಕೈಬೀಸಿದ ರಾಹುಲ್ ಗಾಂಧಿ

ನವದೆಹಲಿ: ಕಾಂಗ್ರೆನ್ ನ ಭಾರತ್ ಜೋಡೋ ಯಾತ್ರೆ ಈ ತಿಂಗಳು ಪಂಜಾಬ್ ಹಾಗೂ ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಲಿದ್ದು, ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಭದ್ರತೆಯನ್ನು ಬಿಗಿಗೊಳಿಸಲು ಭದ್ರತಾ ಸಂಸ್ಥೆಗಳು ಸಿದ್ಧತೆ ನಡೆಸಿವೆ.

ಮೂಲಗಳ ಪ್ರಕಾರ, ಎರಡೂ ಪ್ರದೇಶಗಳು ಸೂಕ್ಷ್ಮವಾಗಿರುವುದರಿಂದ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಿದೆ.

ಭದ್ರತಾ ಸಂಸ್ಥೆಗಳು ಹೆಚ್ಚಿನ ಪಡೆಗಳನ್ನು ನಿಯೋಜಿಸುವ ಪ್ರಕ್ರಿಯೆಯಲ್ಲಿ ತೊಡಗಿದ್ದು, ರಾಹುಲ್ ಗಾಂಧಿ ಯಾತ್ರೆ ಸಾಗುವ ಮಾರ್ಗದ ಬಗ್ಗೆ ಸ್ಥಳೀಯ ಪೊಲೀಸರಿಂದ ಮಾಹಿತಿ ಪಡೆದಿವೆ.

ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿಗೆ ನಡೆದ ಘಟನೆಗಳಿಂದ ಎಚ್ಚೆತ್ತುಕೊಂಡಿರುವ ಭದ್ರತಾ ಸಂಸ್ಥೆಗಳು ಭಾರತ್ ಜೋಡೋ ಯಾತ್ರೆಯ ಮಾರ್ಗದ ಎಲ್ಲಾ ಸ್ಥಳಗಳನ್ನು ಸೂಕ್ಷ್ಮವಾಗಿ ಪರಿಶೀಲಿಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com