ನವಿ ಮುಂಬೈನ ಪೇಪರ್ ರೋಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ, ಸುಟ್ಟು ಕರಕಲಾದ ಮಹಿಳೆ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ನವಿ ಮುಂಬೈ ಪಟ್ಟಣದಲ್ಲಿರುವ ಪೇಪರ್ ರೋಲ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು 40 ವರ್ಷದ ಮಹಿಳೆಯೊಬ್ಬರು ಸುಟ್ಟು ಕರಕಲಾದ ಘಟನೆ ಸೋಮವಾರ ನಡೆದಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ನವಿ ಮುಂಬೈ ಪಟ್ಟಣದಲ್ಲಿರುವ ಪೇಪರ್ ರೋಲ್ ತಯಾರಿಕಾ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡು 40 ವರ್ಷದ ಮಹಿಳೆಯೊಬ್ಬರು ಸುಟ್ಟು ಕರಕಲಾದ ಘಟನೆ ಸೋಮವಾರ ನಡೆದಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಶನಿವಾರ ಮಧ್ಯಾಹ್ನ 3.30 ರ ಸುಮಾರಿಗೆ ಐರೋಲಿ ಪ್ರದೇಶದಲ್ಲಿರುವ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡದೆ ಎಂದು ನವಿ ಮುಂಬೈ ಮಹಾನಗರ ಪಾಲಿಕೆಯ ವಿಭಾಗೀಯ ಅಗ್ನಿಶಾಮಕ ಅಧಿಕಾರಿ ಪುರುಷೋತ್ತಮ್ ಜಾಧವ್ ತಿಳಿಸಿದ್ದಾರೆ.

ಐರೋಲಿ, ಅಕ್ಕಪಕ್ಕದ ಕೋಪರ್‌ಖೈರ್ನೆ, ವಾಶಿ ಮತ್ತು ರಬಲೆಯಿಂದ ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ ಶನಿವಾರ ತಡರಾತ್ರಿಯ ವೇಳೆಗೆ ಬೆಂಕಿಯನ್ನು ನಂದಿಸಿದ್ದಾರೆ.

ಕೂಲಿಂಗ್ ಕಾರ್ಯಾಚರಣೆಯ ನಂತರ, ಅಗ್ನಿಶಾಮಕ ಸಿಬ್ಬಂದಿ ಕಾರ್ಖಾನೆ ಆವರಣವನ್ನು ಪರಿಶೀಲಿಸಿದಾಗ, ಉರ್ಮಿಳಾ ನಾಯಕ್ ಎಂದು ಗುರುತಿಸಲಾದ ಮಹಿಳೆಯ ಸುಟ್ಟ ಶವ ಪತ್ತೆಯಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸ್ಥಳೀಯ ನಿವಾಸಿಯಾಗಿರುವ ಮಹಿಳೆ ಕಾರ್ಖಾನೆಯ ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದು, ಬೆಂಕಿಯಲ್ಲಿ ಸಿಲುಕಿಕೊಂಡಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಘಟನೆಯಲ್ಲಿ ಗಾಯಗೊಂಡಿದ್ದು, ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ರಬಳೆ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬೆಂಕಿ ಹೊತ್ತುಕೊಳ್ಳಲು ಕಾರಣವನ್ನು ಕಂಡುಹಿಡಿಯಲು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com