ವಿಮಾನಕ್ಕೆ ಬಾಂಬ್‌ ಬೆದರಿಕೆ: ಜಾಮ್‌ನಗರದ ಸೇನಾ ವಾಯುನೆಲೆಯಲ್ಲಿ ತುರ್ತು ಭೂಸ್ಪರ್ಶ, ಎಲ್ಲೆಡೆ ತೀವ್ರ ತಪಾಸಣೆ

ರಷ್ಯಾದ ಮಾಸ್ಕೋದಿಂದ ಗೋವಾಗೆ ಬರುತ್ತಿದ್ದ ಚಾರ್ಟರ್ಡ್‌ ವಿಮಾನಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿಮಾನವನ್ನು ಗುಜರಾತ್‌ನ ಜಾಮ್‌ನಗರದ ಭಾರತೀಯ ವಾಯುಸೇನೆಯ ನೆಲೆಯಲ್ಲಿ  ತುರ್ತು ಭೂಸ್ಪರ್ಶ ಮಾಡಲಾಗಿದೆ.
ಜಾಮ್‌ನಗರ ವಿಮಾನ ನಿಲ್ದಾಣದಲ್ಲಿರುವ ಭದ್ರತಾ ಸಿಬ್ಬಂದಿಗಳು.
ಜಾಮ್‌ನಗರ ವಿಮಾನ ನಿಲ್ದಾಣದಲ್ಲಿರುವ ಭದ್ರತಾ ಸಿಬ್ಬಂದಿಗಳು.

ನವದೆಹಲಿ: ರಷ್ಯಾದ ಮಾಸ್ಕೋದಿಂದ ಗೋವಾಗೆ ಬರುತ್ತಿದ್ದ ಚಾರ್ಟರ್ಡ್‌ ವಿಮಾನಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದ್ದು, ಈ ಹಿನ್ನೆಲೆಯಲ್ಲಿ ವಿಮಾನವನ್ನು ಗುಜರಾತ್‌ನ ಜಾಮ್‌ನಗರದ ಭಾರತೀಯ ವಾಯುಸೇನೆಯ ನೆಲೆಯಲ್ಲಿ  ತುರ್ತು ಭೂಸ್ಪರ್ಶ ಮಾಡಲಾಗಿದೆ.

ಬಾಂಬ್ ಇರುವುದರ ಬಗ್ಗೆ ಮಾಹಿತಿ ತಿಳಿದ ಸಿಬ್ಬಂದಿ ತಕ್ಷಣವೇ ಪೈಲಟ್‍ಗೆ ಮಾಹಿತಿ ತಿಳಿಸಿದ್ದಾರೆ. ಆ ಬಳಿಕ ಗೋವಾಕ್ಕೆ ತೆರಳುತ್ತಿದ ವಿಮಾನವನ್ನು ಗುಜರಾತ್‍ನ ಜಾಮ್‍ನಗರದ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗಿದೆ.

ಸದ್ಯ ಪೊಲೀಸ್ ಹಿರಿಯ ಅಧಿಕಾರಿಯೊಂದಿಗೆ ಬಾಂಬ್ ನಿಷ್ಕ್ರಿಯ ದಳ ಕೂಡಾ ಜಾಮ್‍ನಗರದ ವಿಮಾನ ನಿಲ್ದಾಣಕ್ಕೆ ತಲುಪಿ, ವಿಮಾನವನ್ನು ಪರೀಶೋಧನೆ ಮಾಡುತ್ತಿದ್ದು, 244 ‌ ಮಂದಿಯನ್ನು ರಕ್ಷಣೆ ಮಾಡಲಾಗಿದೆ.

ಮಾಸ್ಕೋದಿಂದ ಟೇಕಾಫ್‌ ಆಗಿದ್ದ ಈ ವಿಮಾನವು ಡಬೋಲಿಮ್ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್‌ ಆಗಬೇಕಿತ್ತು. ಸದ್ಯ ಡಬೋಲಿಮ್‌ ಏರ್‌ಪೋರ್ಟ್‌ನ ಸುತ್ತಮುತ್ತ ಭದ್ರತೆ ಬಿಗಿಗೊಳಿಸಲಾಗಿದೆ.

ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ: ಅಧಿಕಾರಿಗಳು

ಈ ನಡುವೆ ತಪಾಸಣೆ ನಡೆಸಿದ ವಿಮಾನದಲ್ಲಿ ರಾಷ್ಟ್ರೀಯ ಭದ್ರತಾ ಸಿಬ್ಬಂದಿ (ಎನ್‌ಎಸ್‌ಜಿ)ಗೆ ಯಾವುದೇ ರೀತಿಯ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಮಾಸ್ಕೋ-ಗೋವಾ ಚಾರ್ಟರ್ಡ್ ವಿಮಾನದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ ಎಂದು ಜಾಮ್‌ನಗರ ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ.

ಎಲ್ಲಾ ಕ್ಯಾಬಿನ್ ಬ್ಯಾಗೇಜ್‌ಗಳನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿದೆ. ತುರ್ತು ಭೂಸ್ಪರ್ಶ ಮಾಡಿರುವ ವಿಮಾನವು ಜಾಮ್‌ನಗರದಿಂದ ಗೋವಾಕ್ಕೆ ಬೆಳಿಗ್ಗೆ 10.30 ರಿಂದ 11 ರವರೆಗೆ ಹೊರಡಲಿದೆ ಎಂದು ಹೇಳಿದ್ದಾರೆ.
 
ಏತನ್ಮಧ್ಯೆ, ಭದ್ರತಾ ಪಡೆಗಳು ಮಾಸ್ಕೋ-ಗೋವಾ ಚಾರ್ಟರ್ಡ್ ವಿಮಾನದಲ್ಲಿದ್ದ ಪ್ರಯಾಣಿಕರನ್ನು ತೀವ್ರ ಶೋಧ ನಡೆಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com