ಯುವತಿ ಕುಟುಂಬಸ್ಥರಿಂದ ಪ್ರತಿಭಟನೆ
ದೇಶ
ಕಾಂಜಾವಾಲ ಪ್ರಕರಣ: ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ಯುವತಿ ಕುಟುಂಬದಿಂದ ಪ್ರತಿಭಟನೆ
ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಮೃತ ಯುವತಿ ಅಂಜಲಿ ಸಿಂಗ್ ಅವರ ಕುಟುಂಬ ಸದಸ್ಯರು...
ನವದೆಹಲಿ: ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಮೃತ ಯುವತಿ ಅಂಜಲಿ ಸಿಂಗ್ ಅವರ ಕುಟುಂಬ ಸದಸ್ಯರು ಮಂಗಳವಾರ ಸುಲ್ತಾನ್‌ಪುರಿ ಪೊಲೀಸ್ ಠಾಣೆ ಮುಂದೆ ಧರಣಿ ನಡೆಸುತ್ತಿದ್ದಾರೆ.
ಯುವತಿ ಕುಟುಂಬಸ್ಥರು ಕೊರೆಯುವ ಚಳಿಯನ್ನು ಲೆಕ್ಕಿಸದೇ ಸುಲ್ತಾನ್‌ಪುರಿ ಪೊಲೀಸ್ ಠಾಣೆಯ ಹೊರಗೆ ಕುಳಿತು ಪ್ರತಿಭಟನೆ ನಡೆಸುತ್ತಿದ್ದು, ಎಫ್‌ಐಆರ್‌ನಲ್ಲಿ ಐಪಿಸಿ ಸೆಕ್ಷನ್ 302 (ಕೊಲೆ) ಸೇರಿಸಬೇಕೆಂದು ಒತ್ತಾಯಿಸಿದ್ದಾರೆ.
ಅಂಜಲಿ ಸಿಂಗ್ ಅವರ ಸಂಬಂಧಿಕರು ಈ ಹಿಂದೆಯೂ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ್ದರು ಮತ್ತು ಆರೋಪಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದ್ದರು.
ಘಟನೆಗೆ ಸಂಬಂಧಿಸಿದಂತೆ ನಗರ ಪೊಲೀಸರು ಈವರೆಗೆ ದೀಪಕ್ ಖನ್ನಾ(26), ಅಮಿತ್ ಖನ್ನಾ (25), ಕ್ರಿಶನ್ (27), ಮಿಥುನ್ (26) ಮತ್ತು ಮನೋಜ್ ಮಿತ್ತಲ್ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.


