ಮುಂಬೈ ವಿಮಾನ ನಿಲ್ದಾಣದಲ್ಲಿ 28 ಕೋಟಿ ರೂ. ಮೌಲ್ಯದ ಕೊಕೇನ್‌ ವಶ, ಡ್ರಗ್ಸ್ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಡಫಲ್ ಬ್ಯಾಗ್‌ನಲ್ಲಿ ಗುಪ್ತವಾಗಿ ಸಾಗಿಸುತ್ತಿದ್ದ ಬರೋಬ್ಬರಿ 28.1 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದು, ಡ್ರಗ್ಸ್ ಸಾಗಿಸುತ್ತಿದ್ದ ವ್ಯಕ್ತಿಯನ್ನು
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮುಂಬೈ: ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆಯ ಅಧಿಕಾರಿಗಳು ಡಫಲ್ ಬ್ಯಾಗ್‌ನಲ್ಲಿ ಗುಪ್ತವಾಗಿ ಸಾಗಿಸುತ್ತಿದ್ದ ಬರೋಬ್ಬರಿ 28.1 ಕೋಟಿ ರೂಪಾಯಿ ಮೌಲ್ಯದ ಕೊಕೇನ್ ಅನ್ನು ವಶಪಡಿಸಿಕೊಂಡಿದ್ದು, ಡ್ರಗ್ಸ್ ಸಾಗಿಸುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

2.81 ಕೆಜಿ ಕೊಕೆನ್ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಬಂಧಿಸಲಾಗಿದ್ದು, ಈ ಡ್ರಗ್ಸ್ ನ ಮಾರುಕಟ್ಟೆ ಮೌಲ್ಯ 28.1 ಕೋಟಿ ರೂಪಾಯಿ ಎಂದು ಕಸ್ಟಮ್ಸ್ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನೈನಿತಾಲ್ ಮೂಲದ ವ್ಯಕ್ತಿ ಕೊಕೇನ್ ಅನ್ನು "ಡಫಲ್ ಬ್ಯಾಗ್‌ನಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ಹ್ಯಾಂಡ್ ಬ್ಯಾಗ್ ನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದಾಗ ಅನುಮಾನಗೊಂಡ ಪೊಲೀಸರು ಆತನನ್ನು ತಪಾಸಣೆಗೆ ಒಳಪಡಿಸಿದ್ದಾರೆ. ಈ ವೇಳೆ ಕೊಕೇನ್ ಪತ್ತೆಯಾಗಿದೆ" ಎಂದು ಪ್ರಕಟಣೆ ತಿಳಿಸಿದೆ.

ವಿಚಾರಣೆ ವೇಳೆ ಆರೋಪಿ ತಾನು ಹನಿಟ್ರ್ಯಾಪ್ ಗೆ ಒಳಗಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬರು ತನ್ನನ್ನು ಬೆದರಿಸಿ ಈ ಕೆಲಸ ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾನೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com