
ನವದೆಹಲಿ: ತನ್ನ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ಮಾಂಸದ ತುಂಡು ಎಸೆಯುವ ಮೂಲಕ ಪೊಲೀಸರಿಗೆ ಸಿಕ್ಕಿ ಬಿದಿದ್ದ ನರ ಹಂತಕ ಅಫ್ತಾಬ್ ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ಕೋರ್ಟ್ ವಿಸ್ತರಿಸಿದೆ.
ಆರೋಪಿ ಪೂನಾವಾಲನನ್ನು ಇಂದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಅವಿರಾಲ್ ಶುಕ್ಲಾ ಮುಂದೆ ಹಾಜರುಪಡಿಸಿದರು. ನ್ಯಾಯಾಲಯ ಆತನನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಅಲ್ಲದೇ, ಆತನಿಗೆ ಬೆಚ್ಚನೆಯ ಬಟ್ಟೆ ನೀಡುವಂತೆ ಕಾರಾಗೃಹ ಅಧಿಕಾರಿಗಳಿಗೆ ನಿರ್ದೇಶನ ನೀಡಿತು.
ಜನವರಿ 6 ರಂದು ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ನಾಲ್ಕು ದಿನಗಳ ಕಾಲ ವಿಸ್ತರಿಸಿತು. ಇದೀಗ ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ಅವಧಿ ವಿಸ್ತಾರಗೊಂಡಿದೆ.
Advertisement