ಮುಳುಗುತ್ತಿದೆ ಜೋಶಿಮಠ: ತುರ್ತು ಅರ್ಜಿ ಪರಿಶೀಲನೆಗೆ ಸುಪ್ರೀಂಕೋರ್ಟ್ ನಕಾರ

ಇತಿಹಾಸ ಪ್ರಸಿದ್ಧ ಉತ್ತರಾಖಂಡ್​​ನ ಜೋಶಿಮಠ ಅಳವಿನಂಚಿಗೆ ತಲುಪುತ್ತಿದ್ದು, ಈ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತುರ್ತು ಪರಿಶೀಲನೆ ನಡೆಸಲು ಸುಪ್ರೀಕೋರ್ಟ್ ಮಂಗಳವಾರ ನಿರಾಕರಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ನವದೆಹಲಿ: ಇತಿಹಾಸ ಪ್ರಸಿದ್ಧ ಉತ್ತರಾಖಂಡ್​​ನ ಜೋಶಿಮಠ ಅಳವಿನಂಚಿಗೆ ತಲುಪುತ್ತಿದ್ದು, ಈ ಸಂಬಂಧ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತುರ್ತು ಪರಿಶೀಲನೆ ನಡೆಸಲು ಸುಪ್ರೀಕೋರ್ಟ್ ಮಂಗಳವಾರ ನಿರಾಕರಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ಪಿಎಸ್ ನರಸಿಂಹ ಅವರಿದ್ದ ಪೀಠವು, ಈ ಸಮಸ್ಯೆಯನ್ನು ಪರಿಶೀಲಿಸಲು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸಂಸ್ಥೆಗಳಿವೆ ಎಂದು ಹೇಳಿದ್ದು, ಜನವರಿ 16ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಮುಖ್ಯವಾದ ಎಲ್ಲವೂ ಸುಪ್ರೀಂಕೋರ್ಟ್‌ ಅಂಗಳಕ್ಕೆ ಬರಬೇಕಾಗಿಲ್ಲ. ಈ ಸಮಸ್ಯೆಯನ್ನು ನಿರ್ವಹಿಸಲು ಪ್ರಜಾಸತ್ತಾತ್ಮಕವಾಗಿ ಚುನಾಯಿತ ಸಂಸ್ಥೆಗಳಿವೆ ಎಂದು ಪೀಠ ಹೇಳಿದೆ.

ಈ ಹಿಂದೆ ಆದೇಶ ನೀಡಿದ್ದ ಸುಪ್ರೀಂಕೋರ್ಟ್, ಜೋಶಿಮಠದಲ್ಲಿ ಉದ್ಭವಿಸಿರುವ ಆಪತ್ತನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ನ್ಯಾಯಾಲಯದ ಮಧ್ಯಪ್ರವೇಶ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಮಂಗಳವಾರವೇ ತುರ್ತು ವಿಚಾರಣೆಗೆ ಪಟ್ಟಿ ಮಾಡುವಂತೆ ನಮೂದಿಸಲು ಅರ್ಜಿದಾರರಿಗೆ ಸೂಚಿಸಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com