ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಭಾರತೀಯ ಆಹಾರ ನಿಗಮದಲ್ಲಿ 'ಭ್ರಷ್ಟಾಚಾರ': 50 ಸ್ಥಳಗಳಲ್ಲಿ ಸಿಬಿಐ ದಾಳಿ; ಡಿಜಿಎಂ ಬಂಧನ

ಭಾರತೀಯ ಆಹಾರ ನಿಗಮ(ಎಫ್‌ಸಿಐ)ದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬುಧವಾರ ನಿಗಮದ ಡಿಜಿಎಂ ಶ್ರೇಣಿಯ ಅಧಿಕಾರಿಯನ್ನು ಬಂಧಿಸಿದೆ ಮತ್ತು ಪಂಜಾಬ್, ಹರಿಯಾಣ ಮತ್ತು ದೆಹಲಿ ಸೇರಿದಂತೆ...

ನವದೆಹಲಿ: ಭಾರತೀಯ ಆಹಾರ ನಿಗಮ(ಎಫ್‌ಸಿಐ)ದಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಬುಧವಾರ ನಿಗಮದ ಡಿಜಿಎಂ ಶ್ರೇಣಿಯ ಅಧಿಕಾರಿಯನ್ನು ಬಂಧಿಸಿದೆ ಮತ್ತು ಪಂಜಾಬ್, ಹರಿಯಾಣ ಮತ್ತು ದೆಹಲಿ ಸೇರಿದಂತೆ ದೇಶದ 50 ಸ್ಥಳಗಳಲ್ಲಿ ದಾಳಿ ನಡೆಸಿ ತೀವ್ರ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಎಫ್‌ಸಿಐನಲ್ಲಿ ತಾಂತ್ರಿಕ ಸಹಾಯಕರಿಂದ ಕಾರ್ಯನಿರ್ವಾಹಕ ನಿರ್ದೇಶಕರವರೆಗಿನ ಎಲ್ಲಾ ಅಧಿಕಾರಿಗಳನ್ನು ಸಿಬಿಐ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಎಫ್‌ಸಿಐನಲ್ಲಿ 50,000 ಲಂಚ ಪಡೆಯುತ್ತಿದ್ದ ಡೆಪ್ಯುಟಿ ಜನರಲ್ ಮ್ಯಾನೇಜರ್(ಡಿಜಿಎಂ)ನನ್ನು ಸಿಬಿಐ ಬಂಧಿಸಿದ ನಂತರ 50 ಸ್ಥಳಗಲ್ಲಿ ಶೋಧ ಆರಂಭಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಎಫ್‌ಸಿಐನಲ್ಲಿ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಿಬಿಐಗೆ ಹಲವು ದೂರುಗಳು ಬಂದ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಕೇಂದ್ರ ತನಿಖಾ ಸಂಸ್ಥೆ ಗುಪ್ತಚರ ಮಾಹಿತಿ ಕಲೆ ಹಾಕುತ್ತಿತ್ತು ಎಂದು ಅವರು ಹೇಳಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com