ವಿಮಾನದಲ್ಲಿ ಪ್ರಯಾಣಿಕರಿಗೆ ನೀಡಿದ ಆಹಾರದಲ್ಲಿ ಕಲ್ಲು ಪತ್ತೆ; ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದ ಏರ್ ಇಂಡಿಯಾ

ಒಂದಿಲ್ಲೊಂದು ವಿಚಾರಗಳಿಗಾಗಿ ಸುದ್ದಿಯಲ್ಲಿರುವ ಏರ್ ಇಂಡಿಯಾ, ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ವಿಮಾನದಲ್ಲಿ ತನಗೆ ನೀಡಿದ ಆಹಾರದಲ್ಲಿ ಕಲ್ಲು ಕಂಡುಬಂದಿದೆ ಎಂದು ಪ್ರಯಾಣಿಕರೊಬ್ಬರು ದೂರಿದ ನಂತರ, ವಿಮಾನಯಾನ ಸಂಸ್ಥೆ ಮಂಗಳವಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ಆಹಾರ ತಯಾರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.
ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ನೀಡಿದ್ದ ಆಹಾರದಲ್ಲಿ ಪತ್ತೆಯಾದ ಕಲ್ಲು
ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ನೀಡಿದ್ದ ಆಹಾರದಲ್ಲಿ ಪತ್ತೆಯಾದ ಕಲ್ಲು

ನವದೆಹಲಿ: ಒಂದಿಲ್ಲೊಂದು ವಿಚಾರಗಳಿಗಾಗಿ ಸುದ್ದಿಯಲ್ಲಿರುವ ಏರ್ ಇಂಡಿಯಾ, ಇದೀಗ ಮತ್ತೊಮ್ಮೆ ಸುದ್ದಿಯಲ್ಲಿದೆ. ವಿಮಾನದಲ್ಲಿ ತನಗೆ ನೀಡಿದ ಆಹಾರದಲ್ಲಿ ಕಲ್ಲು ಕಂಡುಬಂದಿದೆ ಎಂದು ಪ್ರಯಾಣಿಕರೊಬ್ಬರು ದೂರಿದ ನಂತರ, ವಿಮಾನಯಾನ ಸಂಸ್ಥೆ ಮಂಗಳವಾರ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದೆ ಮತ್ತು ಆಹಾರ ತಯಾರಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದೆ.

ಜನವರಿ 8 ರಂದು ಮಹಿಳಾ ಪ್ರಯಾಣಿಕರೊಬ್ಬರು AI 215 ನಲ್ಲಿನ ವಿಮಾನದ ಆಹಾರದಲ್ಲಿ ಕಲ್ಲು ಕಂಡುಬಂದಿದೆ ಎಂದು ಟ್ವೀಟ್ ಮಾಡಿದ್ದು, ಚಿತ್ರಗಳನ್ನು ಸಹ ಹಂಚಿಕೊಂಡಿದ್ದಾರೆ. ಈ ವಿಮಾನ ದೆಹಲಿಯಿಂದ ಕಾಠ್ಮಂಡುವಿಗೆ ಪ್ರಯಾಣಿಸುತ್ತಿತ್ತು.

AI 215 ನಲ್ಲಿ ಪ್ರಯಾಣಿಕರೊಬ್ಬರಿಗೆ ನೀಡಿದ ಆಹಾರದಲ್ಲಿ ಕಲ್ಲು ಪತ್ತೆಯಾದ ಘಟನೆಯನ್ನು ಏರ್ ಇಂಡಿಯಾ ಗಂಭೀರವಾಗಿ ಪರಿಗಣಿಸಿದೆ. ಈ ಘಟನೆಗೆ ನಾವು ಪ್ರಾಮಾಣಿಕವಾಗಿ ವಿಷಾದಿಸುತ್ತೇವೆ ಮತ್ತು ಪ್ರಯಾಣಿಕರಲ್ಲಿ ಕ್ಷಮೆಯಾಚಿಸುತ್ತೇವೆ ಎಂದು ಏರ್ ಇಂಡಿಯಾ ವಕ್ತಾರರು ಮಂಗಳವಾರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

'ನಾವು ಆಹಾರ ತಯಾರಿಸುವವರೊಂದಿಗೆ ಈ ವಿಚಾರದ ಕುರಿತು ವಿಚಾರಣೆ ನಡೆಸುತ್ತೇವೆ ಮತ್ತು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ವಕ್ತಾರರು ಹೇಳಿದರು.

ಜನವರಿ 8 ರಂದು ಏರ್ ಇಂಡಿಯಾವನ್ನು ಟ್ಯಾಗ್ ಮಾಡುವ ಮೂಲಕ ಪ್ರಯಾಣಿಕರಾದ ಸರ್ವಪ್ರಿಯಾ ಸಾಂಗ್ವಾನ್ ಅವರು, 'ಕಲ್ಲು ಮುಕ್ತ ಆಹಾರವನ್ನು ಖಚಿತಪಡಿಸಿಕೊಳ್ಳಲು ನಿಮಗೆ ಸಂಪನ್ಮೂಲಗಳು ಮತ್ತು ಹಣದ ಅಗತ್ಯವಿಲ್ಲ ಏರ್ ಇಂಡಿಯಾ ಎಂದು ಟ್ವೀಟ್ ಮಾಡಿದ್ದಾರೆ.

ವಿಮಾನದಲ್ಲಿ ನೀಡಲಾದ ಆಹಾರದ ಚಿತ್ರಗಳನ್ನು ಹಂಚಿಕೊಂಡ ಅವರು, ಇದು AI 215 ವಿಮಾನದಲ್ಲಿ ಬಡಿಸಿದ ಆಹಾರ. ಏರ್ ಇಂಡಿಯಾ ಸಿಬ್ಬಂದಿಯಾದ ಜಾಡೋನ್ ಅವರಿಗೆ ಈ ಬಗ್ಗೆ ತಿಳಿಸಲಾಗಿದೆ. ಈ ರೀತಿಯ ನಿರ್ಲಕ್ಷ್ಯ ಸ್ವೀಕಾರಾರ್ಹವಲ್ಲ' ಎಂದು ಏರ್ ಇಂಡಿಯಾವನ್ನು ಟ್ಯಾಗ್ ಮಾಡಿದ್ದಾರೆ.

ಟ್ವೀಟ್‌ಗೆ ಪ್ರತಿಕ್ರಿಯಿಸಿದ ಏರ್ ಇಂಡಿಯಾ, 'ಈ ಸಂಬಂಧ ಆಹಾರ ತಯಾರಿಸಿದ ತಂಡದೊಂದಿಗೆ ಮಾತನಾಡುತ್ತೇವೆ ಮತ್ತು ಕ್ರಮ ತೆಗೆದುಕೊಳ್ಳುತ್ತೇವೆ. ದಯವಿಟ್ಟು ಹಿಂತಿರುಗಲು ನಮಗೆ ಸ್ವಲ್ಪ ಸಮಯ ನೀಡಿ. ಇದನ್ನು ನಮ್ಮ ಗಮನಕ್ಕೆ ತಂದಿದ್ದಕ್ಕಾಗಿ ನಾವು ಪ್ರಶಂಸಿಸುತ್ತೇವೆ' ಎಂದು ಏರ್‌ಲೈನ್ ಜನವರಿ 8 ರಂದು ಟ್ವೀಟ್‌ನಲ್ಲಿ ತಿಳಿಸಿದೆ.

ಇತ್ತೀಚಿನ ದಿನಗಳಲ್ಲಿ, ಎರಡು ಅಂತರರಾಷ್ಟ್ರೀಯ ವಿಮಾನಗಳಲ್ಲಿ ಪ್ರಯಾಣಿಕರ ದುರ್ವರ್ತನೆಯ ಘಟನೆಗಳನ್ನು ವರದಿ ಮಾಡಿದ್ದಕ್ಕಾಗಿ ಟಾಟಾ ಸಮೂಹದ ಒಡೆತನದ ಏರ್ ಇಂಡಿಯಾವು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (ಡಿಜಿಸಿಎ) ಕೋಪಕ್ಕೆ ಗುರಿಯಾಗಿದ್ದು, ನಿಯಂತ್ರಕರು ವಿಮಾನಯಾನ ಸಂಸ್ಥೆಗೆ ಶೋಕಾಸ್ ನೋಟಿಸ್ ಕೂಡ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com