ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 171 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಏರಿಕೆ
ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 171 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,342ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ
Published: 11th January 2023 12:20 PM | Last Updated: 11th January 2023 12:20 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 171 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದೇ ವೇಳೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,342ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ
ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,80,386ಕ್ಕೆ ಏರಿಕೆಯಾಗಿದ್ದು, ಸಾವಿಗೀಡಾದವರ ಸಂಖ್ಯೆ 5,30,722ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01ರಷ್ಟು ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 0.09ರಷ್ಟಿದೆ ಮತ್ತು ಮರಣ ಪ್ರಮಾಣ 1.19ರಷ್ಟಿದೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.80ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ತಿಳಿಸಿದೆ.
ಇನ್ನು ಈವರೆಗೆ 4,41,47,322 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಈವರೆಗೆ 220.15 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ ಎಂದು ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.