ಉಸಿರಾಟದ ವೈರಲ್ ಸೋಂಕು: ಆಸ್ಪತ್ರೆಯಿಂದ ಬಿಡುಗಡೆಯಾದ  ಸೋನಿಯಾ ಗಾಂಧಿ

ಉಸಿರಾಟದ ವೈರಲ್ ಸೋಂಕಿನ ಚಿಕಿತ್ಸೆಗಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸೋನಿಯಾ ಗಾಂಧಿ
ಸೋನಿಯಾ ಗಾಂಧಿ

ನವದೆಹಲಿ: ಉಸಿರಾಟದ ವೈರಲ್ ಸೋಂಕಿನ ಚಿಕಿತ್ಸೆಗಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಮಂಗಳವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿರುವ ಹಿನ್ನೆಲೆಯಲ್ಲಿ ಅವರನ್ನು ಬಿಡುಗಡೆ ಮಾಡಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಗಂಗಾ ರಾಮ್ ಆಸ್ಪತ್ರೆಯ ಅಧ್ಯಕ್ಷ (ನಿರ್ವಹಣಾ ಮಂಡಳಿ) ಡಾ. ಅಜಯ್ ಸ್ವರೂಪ್ ಮಾತನಾಡಿ, 'ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಜನವರಿ 10 ರಂದು ಮಧ್ಯಾಹ್ನ 3 ಗಂಟೆಗೆ ಸ್ಥಿರ ಮತ್ತು ತೃಪ್ತಿಕರ ಸ್ಥಿತಿಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ' ಎಂದು ಹೇಳಿದರು.

ಉಸಿರಾಟದ ಸೋಂಕಿನಿಂದ ಬಳಲುತ್ತಿದ್ದ ಸೋನಿಯಾ ಗಾಂಧಿ ಅವರನ್ನು ಜನವರಿ 4 ರಂದು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಡಿಸೆಂಬರ್ 24 ರಂದು ಸೋನಿಯಾ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಪುತ್ರ ರಾಹುಲ್ ಗಾಂಧಿಯವರೊಂದಿಗೆ ಹೆಜ್ಜೆ ಹಾಕಿದ್ದರು.

ತಮ್ಮ ನೇತೃತ್ವದ ಭಾರತ್ ಜೋಡೋ ಯಾತ್ರೆ ಶನಿವಾರ ರಾಷ್ಟ್ರ ರಾಜಧಾನಿಯನ್ನು ತಲುಪುತ್ತಿದ್ದಂತೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ಭಾವನಾತ್ಮಕ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. ಅವರು ತಮ್ಮ ತಾಯಿ ಮತ್ತು ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯಿಂದ ಪಡೆದ ಪ್ರೀತಿಯನ್ನು ದೇಶದೊಂದಿಗೆ ಹಂಚಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com