ಬಿಜೆಪಿ ರಾಜ್ಯಪಾಲರನ್ನು ಕಾರ್ಯಕರ್ತರಂತೆ ಬಳಸುತ್ತಿದೆ: ಮಲ್ಲಿಕಾರ್ಜನ ಖರ್ಗೆ

ಡಿಎಂಕೆ ನೇತೃತ್ವದ ಸರ್ಕಾರ ಮತ್ತು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ನಡುವಿನ ಗದ್ದಲದ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ರಾಜ್ಯಪಾಲರನ್ನು ಕಾರ್ಯಕರ್ತರಂತೆ ಬಳಸುತ್ತಿದೆ ಎಂದು ಟೀಕಿಸಿದ್ದಾರೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಡಿಎಂಕೆ ನೇತೃತ್ವದ ಸರ್ಕಾರ ಮತ್ತು ತಮಿಳುನಾಡು ರಾಜ್ಯಪಾಲ ಆರ್‌ಎನ್ ರವಿ ನಡುವಿನ ಗದ್ದಲದ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ರಾಜ್ಯಪಾಲರನ್ನು ಕಾರ್ಯಕರ್ತರಂತೆ ಬಳಸುತ್ತಿದೆ ಎಂದು ಟೀಕಿಸಿದ್ದಾರೆ.

ರಾಜ್ಯಪಾಲರನ್ನು ಕಾರ್ಯಕರ್ತರಂತೆ ಬಳಸುವ ಮೂಲಕ ಬಿಜೆಪಿ 'ಸಂವಿಧಾನದ ಸ್ಪಷ್ಟ ಉಲ್ಲಂಘನೆ' ಮಾಡುತ್ತಿದೆ. ಭಾರತೀಯ ರಾಜಕೀಯದ ಫೆಡರಲ್ ರಚನೆಯನ್ನು ಭ್ರಷ್ಟಗೊಳಿಸಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ವಿಧಾನಸಭೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಪಾಲ  ರವಿ ಅವರು ಮುಖಾಮುಖಿಯಾಗಿದ್ದರು. ಅಲ್ಲಿ ಆಡಳಿತಾರೂಢ ಡಿಎಂಕೆ ಅಧ್ಯಕ್ಷರೂ ಆಗಿರುವ ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ಸದನದಲ್ಲಿ ತಮ್ಮ ಸಾಂಪ್ರದಾಯಿಕ ಭಾಷಣದಿಂದ ಹೊರಗುಳಿದ ರಾಜ್ಯಪಾಲರ ವಿರುದ್ಧ ನಿರ್ಣಯವನ್ನು ಮಂಡಿಸಿದರು.

'ರಾಜ್ಯಪಾಲರು ಸಂವಿಧಾನದ ಚೌಕಟ್ಟಿನೊಳಗೆ ಕಾರ್ಯನಿರ್ವಹಿಸಬೇಕು. ಅವರು ಭಾಗವಾಗಿರುವ ಶಾಸಕಾಂಗವನ್ನು ಅವಮಾನಿಸಲು ಸಾಧ್ಯವಿಲ್ಲ. ಆದರೆ ಬಿಜೆಪಿ ಹೊರತುಪಡಿಸಿ ಇತರ ಪಕ್ಷಗಳು ಆಳುವ ರಾಜ್ಯಗಳಲ್ಲಿ ಸಾಮಾಜಿಕ ಮತ್ತು ರಾಜಕೀಯ ಅಶಾಂತಿಯನ್ನು ಸೃಷ್ಟಿಸಲು ಅವರನ್ನು ದೆಹಲಿಯ ಹೈಕಮಾಂಡ್ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದು ಅಪಾಯಕಾರಿ ಎಂದು ಕಾಂಗ್ರೆಸ್ ಅಧ್ಯಕ್ಷರು ಟ್ವೀಟಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com