ಪೊಲೀಸ್ ಆಯುಕ್ತ ಅಜಿತ್ ಕುಮಾರ್.
ಪೊಲೀಸ್ ಆಯುಕ್ತ ಅಜಿತ್ ಕುಮಾರ್.

ಕೇರಳ: ಕಣ್ಣೂರಿನಲ್ಲಿ ಬಾಂಬ್ ಸ್ಫೋಟ, ಓರ್ವನಿಗೆ ಗಾಯ

ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಕಣ್ಣೂರು (ಕೇರಳ): ಕೇರಳದ ಕಣ್ಣೂರು ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ತಲಶ್ಶೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ತಲಶ್ಶೇರಿ ಲೋಟಸ್ ಟಾಕೀಸ್ ಬಳಿಯಿರುವ ಮನೆಯೊಂದರ್ಲಿ ಬಾಂಬ್ ಸ್ಫೋಟಗೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ಜಿತಿನ್ ನಾಡಮ್ಮಾಲ್ ಎಂದು ಗುರುತಿಸಲಾಗಿದ್ದು, ಸ್ಥಳೀಯ ಆಸ್ಪತ್ರೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಇದೀಗ ಅವರನ್ನು ಕಣ್ಣೂರು ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

ಮನೆಯಲ್ಲಿ ಒಂದಕ್ಕಿಂತ ಹೆಚ್ಚು ಬಾಂಬ್‌ಗಳು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆಂದು ಪೊಲೀಸ್ ಆಯುಕ್ತ ಅಜಿತ್ ಕುಮಾರ್ ತಿಳಿಸಿದ್ದಾರೆ.

Related Stories

No stories found.

Advertisement

X
Kannada Prabha
www.kannadaprabha.com