2022ರಲ್ಲಿ ತಿರುಪತಿ ವೆಂಕಟೇಶ್ವರ ಸ್ವಾಮಿ ದೇವಾಲಯ ಹುಂಡಿಯಲ್ಲಿ ರೂ. 1,450 ಕೋಟಿ ಸಂಗ್ರಹ!

ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯ ಎಂದೇ ಪ್ರಸಿದ್ಧಿಯಾಗಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದ ಹುಂಡಿಯಲ್ಲಿ 2022ರಲ್ಲಿ 1,450 ಕೋಟಿ ರೂಪಾಯಿ ಸಂಗ್ರಹವಾಗಿದೆ.
ತಿರುಪತಿ ಬಾಲಾಜಿ ದೇವಾಲಯದ ಸಾಂದರ್ಭಿಕ ಚಿತ್ರ
ತಿರುಪತಿ ಬಾಲಾಜಿ ದೇವಾಲಯದ ಸಾಂದರ್ಭಿಕ ಚಿತ್ರ

ತಿರುಪತಿ: ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯ ಎಂದೇ ಪ್ರಸಿದ್ಧಿಯಾಗಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದ ಹುಂಡಿಯಲ್ಲಿ 2022ರಲ್ಲಿ 1,450 ಕೋಟಿ ರೂಪಾಯಿ ಸಂಗ್ರಹವಾಗಿದೆ. ಕಳೆದ ವರ್ಷ 2.37 ಕೋಟಿ ಕಳೆದ ವರ್ಷ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿರುವುದಾಗಿ ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಧರ್ಮಾ ರೆಡ್ಡಿ ತಿಳಿಸಿದ್ದಾರೆ.

2021ರಲ್ಲಿ 1.04 ಕೋಟಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದು, 833.41 ಕೋಟಿ ರೂ. ಹಣ ಸಂಗ್ರಹವಾಗಿತ್ತು.  "2022 ರಲ್ಲಿ 2.37 ಕೋಟಿ ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದು,  1,450.50 ಕೋಟಿ ರೂ. ಹುಂಡಿಯಲ್ಲಿ ಸಂಗ್ರಹವಾಗಿತ್ತು ಎಂದು ರೆಡ್ಡಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

2021 ಮತ್ತು 2022 ಆರಂಭದಲ್ಲಿ ಕೊರೋನಾ ನಿರ್ಬಂಧಗಳಿದ್ದವು. ಹೀಗಾಗಿ ಇವೆರಡು ವರ್ಷಗಳನ್ನು ಹೋಲಿಸಲು ಸಾಧ್ಯವಿಲ್ಲ ಎಂದು ದೇವಾಲಯ ಆಡಳಿತ ಮಂಡಳಿ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಧಿಕೃತ ಅಂಕಿ ಅಂಶಗಳ ಪ್ರಕಾರ, ಡಿಸೆಂಬರ್ ತಿಂಗಳೊಂದರಲ್ಲೇ  129.37 ಕೋಟಿ ರೂ. ಹುಂಡಿಯಲ್ಲಿ ಸಂಗ್ರಹವಾಗಿದೆ. 

2023ರ ಜನವರಿ 11ರವರೆಗೆ 6 ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯಕ್ಕೆ ಭೇಟಿ ನೀಡಿದ್ದು, ರೂ.39.40 ಕೋಟಿ ಕಾಣಿಕೆ ಸಲ್ಲಿಸಿದ್ದಾರೆ. 2022ರಲ್ಲಿ 11.54 ಲಕ್ಷ ಲಡ್ಡು ಪ್ರಸಾದ ಮಾರಾಟ ಮಾಡಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com