ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ, ಬಿಗಿ ಭದ್ರತೆ
ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಶನಿವಾರ ಜೀವ ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಗಳು ನಿತಿನ್ ಗಡ್ಕರಿ ಹತ್ಯೆ ಮಾಡುವುದಾಗಿ ಬೆಳಗ್ಗೆ ಎರಡು ಬಾರಿ ಕರೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Published: 14th January 2023 05:15 PM | Last Updated: 14th January 2023 05:15 PM | A+A A-

ಕೇಂದ್ರ ಸಚಿವ ನಿತಿನ್ ಗಡ್ಕರಿ
ನಾಗ್ಪುರ: ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಶನಿವಾರ ಜೀವ ಬೆದರಿಕೆ ಕರೆ ಬಂದಿದೆ. ಅಪರಿಚಿತ ವ್ಯಕ್ತಿಗಳು ನಿತಿನ್ ಗಡ್ಕರಿ ಹತ್ಯೆ ಮಾಡುವುದಾಗಿ ಬೆಳಗ್ಗೆ ಎರಡು ಬಾರಿ ಕರೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಜೀವ ಬೆದರಿಕೆ ಹಿನ್ನೆಲೆಯಲ್ಲಿ ನಿತಿನ್ ಗಡ್ಕರಿ ಅವರ ನಾಗ್ಫುರದಲ್ಲಿನ ನಿವಾಸ ಹಾಗೂ ಕಚೇರಿಗೆ ಭದ್ರತೆ ಹೆಚ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ನಾಗ್ಫುರದ ಖಮ್ಲಾ ರಸ್ತೆಯಲ್ಲಿರುವ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಗೆ ಬೆಳಗ್ಗೆ 11-30 ರಿಂದ ಮಧ್ಯಾಹ್ನ 12-30 ರ ನಡುವೆ ಮೂರು ಬಾರಿ ಬೆದರಿಕೆ ಕರೆಗಳು ಬಂದಿವೆ.
ತದನಂತರ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಕರೆ ಮಾಡಿದವರನ್ನು ಪತ್ತೆ ಹಚ್ಚಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.