ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಇಂದೋರ್ ನಲ್ಲಿ ಇಂಡಿಗೋ ವಿಮಾನ ಲ್ಯಾಂಡ್; ಪ್ರಯಾಣಿಕ ಸಾವು

ಮಧುರೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ ವ್ಯಕ್ತಿಯೊಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣಕ್ಕೆ ತಿರುಗಿಸಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ...
ಇಂಡಿಗೋ ವಿಮಾನ
ಇಂಡಿಗೋ ವಿಮಾನ

ಇಂದೋರ್: ಮಧುರೈನಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ ವ್ಯಕ್ತಿಯೊಬ್ಬರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ವಿಮಾನವನ್ನು ಇಂದೋರ್ ವಿಮಾನ ನಿಲ್ದಾಣಕ್ಕೆ ತಿರುಗಿಸಿ ತುರ್ತು ಲ್ಯಾಂಡಿಂಗ್ ಮಾಡಲಾಗಿದೆ ಎಂದು ಶನಿವಾರ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಮಾನ ಇಂದು ಸಂಜೆ ದೇವಿ ಅಹಲ್ಯಾಬಾಯಿ ಹೋಳ್ಕರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ, 60 ವರ್ಷದ ಪ್ರಯಾಣಿಕರನ್ನು ವಿಮಾನ ನಿಲ್ದಾಣದ ಸಮೀಪವಿರುವ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ವೈದ್ಯರು ಅವರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು ಎಂದು ಅವರು ಹೇಳಿದ್ದಾರೆ.

"ಪ್ರಾಥಮಿಕ ಮಾಹಿತಿಯ ಪ್ರಕಾರ, ಇಂಡಿಗೋ ಏರ್‌ಲೈನ್ಸ್ 6E-2088 ವಿಮಾನದಲ್ಲಿದ್ದ ಅತುಲ್ ಗುಪ್ತಾ(60) ಅವರ ಬಾಯಿಯಿಂದ ರಕ್ತಸ್ರಾವವಾಗುತ್ತಿತ್ತು ಮತ್ತು ಪ್ರಯಾಣದ ಮಧ್ಯದಲ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ " ಎಂದು ವಿಮಾನ ನಿಲ್ದಾಣ ಪ್ರಭಾರಿ ನಿರ್ದೇಶಕ ಪ್ರಬೋಧ್ ಚಂದ್ರ ಶರ್ಮಾ ಅವರು ಪಿಟಿಐಗೆ ತಿಳಿಸಿದ್ದಾರೆ.

ವೈದ್ಯಕೀಯ ತುರ್ತು ಪರಿಸ್ಥಿತಿಯಿಂದಾಗಿ ಮಧುರೈ-ದೆಹಲಿ ವಿಮಾನವನ್ನು ಇಂದೋರ್‌ಗೆ ತಿರುಗಿಸಲಾಯಿತು ಮತ್ತು ಸಂಜೆ 5:30 ರ ಸುಮಾರಿಗೆ ಸ್ಥಳೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಯಿತು ಎಂದು ಅವರು ಹೇಳಿದ್ದಾರೆ.

ಗುಪ್ತಾ ಅವರನ್ನು ವಿಮಾನ ನಿಲ್ದಾಣದಿಂದ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ವೈದ್ಯರ ಪ್ರಕಾರ, ಅವರು ಈಗಾಗಲೇ ಹೃದ್ರೋಗ, ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದರು ಎಂದು ಶರ್ಮಾ ತಿಳಿಸಿದ್ದಾರೆ,

ನಂತರ ವಿಮಾನವು ಸಂಜೆ 6:40ಕ್ಕೆ ದೆಹಲಿಗೆ ಹೊರಟಿತು ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com