ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಶಿಕ್ಷೆ: ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಝಲ್ ಅನರ್ಹ, ಲೋಕಸಭೆ ಸಚಿವಾಲಯ ಅಧಿಸೂಚನೆ
ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
Published: 14th January 2023 11:46 AM | Last Updated: 14th January 2023 11:46 AM | A+A A-

ಲಕ್ಷದ್ವೀಪ ಸಂಸದ ಮೊಹಮ್ಮದ್ ಫೈಝಲ್ ಅನರ್ಹ
ನವದೆಹಲಿ: ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
ಶುಕ್ರವಾರ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಫೈಝಲ್ ಅವರು ಕವರಟ್ಟಿಯ ಸೆಷನ್ಸ್ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾದ ಜನವರಿ 11 ರಿಂದ ಲೋಕಸಭೆಯ ಸದಸ್ಯತ್ವದಿಂದ ಅನರ್ಹರಾಗಿದ್ದಾರೆ. ಈ ನಿರ್ಧಾರವನ್ನು ಭಾರತದ ಸಂವಿಧಾನದ 102 (ಎಲ್) (ಇ) ನಿಬಂಧನೆಗಳ ಅಡಿ ಹಾಗೂ 1951 ರ ಪ್ರಜಾಪ್ರತಿನಿಧಿ ಕಾಯ್ದೆಯ ಸೆಕ್ಷನ್ 8 ಅಡಿಯಲ್ಲಿ.ತೆಗೆದುಕೊಳ್ಳಲಾಗಿದೆ.
ಇದನ್ನೂ ಓದಿ: ರಾಮಚರಿತಮಾನಸ ವಿರುದ್ಧ ಅವಹೇಳನಕಾರಿ ಹೇಳಿಕೆ: ಶಿಕ್ಷಣ ಸಚಿವನ ವಿರುದ್ಧ ಬಿಹಾರ ಕೋರ್ಟ್ ನಲ್ಲಿ ದೂರು ದಾಖಲು!
ಫೈಝಲ್ ಸೇರಿದಂತೆ ನಾಲ್ವರು ಕೊಲೆ ಯತ್ನ ಪ್ರಕರಣದಲ್ಲಿ ತಪ್ಪಿತಸ್ಥರೆಂದು ಸಾಬೀತಾದ ನಂತರ ಲಕ್ಷದ್ವೀಪ ನ್ಯಾಯಾಲಯವು ಬುಧವಾರ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 2009ರ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಪಿಎಂ ಸಯೀದ್ ಅವರ ಅಳಿಯ ಮುಹಮ್ಮದ್ ಸಾಲಿಹ್ ಅವರನ್ನು ಕೊಲ್ಲಲು ಯತ್ನಿಸಿದ ಅಪರಾಧಿಗಳಿಗೆ ಕವರಟ್ಟಿ ಸೆಷನ್ಸ್ ನ್ಯಾಯಾಲಯ ತಲಾ 1 ಲಕ್ಷ ರೂ. ದಂಡ ವಿಧಿಸಿದೆ.
ಕವರತ್ತಿ ಸೆಷನ್ಸ್ ನ್ಯಾಯಾಲಯವು ಜನವರಿ 11ರಂದು ಶಿಕ್ಷೆ ವಿಧಿಸಿದ ದಿನದಿಂದ ಫೈಜಲ್ ಅವರನ್ನು ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಲಾಗಿದೆ ಎಂದು ಉಲ್ಲೇಖ ಮಾಡಿದೆ.