ಜಮ್ಮು-ಕಾಶ್ಮೀರ: ಬುದ್ಗಾಂನಲ್ಲಿ ಉಗ್ರರು, ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ
ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಬುದ್ಗಾಂ ಜಿಲ್ಲೆಯಲ್ಲಿ ಭಾನುವಾರ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
Published: 15th January 2023 12:00 PM | Last Updated: 15th January 2023 12:00 PM | A+A A-

ಭದ್ರತಾ ಪಡೆಗಳ ಚಿತ್ರ
ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಬುದ್ಗಾಂ ಜಿಲ್ಲೆಯಲ್ಲಿ ಭಾನುವಾರ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಸೆಂಟ್ರಲ್ ಕಾಶ್ಮೀರ ಜಿಲ್ಲೆಯ ಮಾಗಮ್ ನ ರೆಡ್ ಬಾಗ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿದಾಗ ಉಗ್ರರು ಭದ್ರತಾ ಪಡೆಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. ಪ್ರತಿಯಾಗಿ ಭದ್ರತಾ ಪಡೆಗಳು ಕೂಡಾ ಗುಂಡಿನ ದಾಳಿ ನಡೆಸಿರುವುದಾಗಿ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಗುಂಡಿನ ಚಕಮಕಿ ಮುಂದುವರೆದಿದೆ ಆದರೆ, ಯಾವುದೇ ಗಾಯ, ಹಾನಿ ಬಗ್ಗೆ ಇನ್ನೂ ವರದಿಯಾಗಿಲ್ಲ . ಪೂರ್ಣ ಮಾಹಿತಿ ತಿಳಿದುಬರಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.