ಕಾಶ್ಮೀರದಲ್ಲಿ ಉಗ್ರರ ಅಡಗುತಾಣ ಪತ್ತೆ, ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶಕ್ಕೆ

ಭದ್ರತಾ ಪಡೆಗಳು ಭಾನುವಾರ ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ಪೂಂಚ್‌ನಲ್ಲಿ ಭಯೋತ್ಪಾದಕರ ಅಡಗುತಾಣವನ್ನು ಭೇದಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶ್ರೀನಗರ: ಭದ್ರತಾ ಪಡೆಗಳು ಭಾನುವಾರ ಜಮ್ಮು ಮತ್ತು ಕಾಶ್ಮೀರದ ಗಡಿ ಜಿಲ್ಲೆ ಪೂಂಚ್‌ನಲ್ಲಿ ಭಯೋತ್ಪಾದಕರ ಅಡಗುತಾಣವನ್ನು ಭೇದಿಸಿದ್ದು, ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸುರನ್‌ಕೋಟೆ ತಹಸಿಲ್‌ನ ಬಹಿಯಾನ್ ವಾಲಿ ಗ್ರಾಮದಲ್ಲಿ ಪೊಲೀಸರು ಮತ್ತು ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಉಗ್ರರ ಅಡಗುತಾಣವನ್ನು ಪತ್ತೆ ಹಚ್ಚಲಾಗಿದೆ ಎಂದು ಅವರು ಹೇಳಿದ್ದಾರೆ.

ಮೂರು ಎಕೆ ಅಸಾಲ್ಟ್ ರೈಫಲ್‌ಗಳು, 10 ಗ್ರೆನೇಡ್‌ಗಳನ್ನು ಒಳಗೊಂಡ ಬಾಕ್ಸ್, ಗ್ರೆನೇಡ್ ಥ್ರೋವರ್ ಮತ್ತು ಕೆಲವು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆದಾಗ್ಯೂ, ಕಾರ್ಯಾಚರಣೆಯ ಸಮಯದಲ್ಲಿ ಯಾರನ್ನೂ ಬಂಧಿಸಲಾಗಿಲ್ಲ. ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com