ಎಲ್ಲೆಡೆ ಮಕರ ಸಂಕ್ರಾಂತಿ ಸಂಭ್ರಮ: ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ
ದೇಶದಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ.
Published: 15th January 2023 12:03 PM | Last Updated: 15th January 2023 01:46 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ದೇಶದಾದ್ಯಂತ ಮಕರ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಜನತೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಭಾನುವಾರ ಶುಭಾಶಯಗಳನ್ನು ಕೋರಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು ಕನ್ನಡದಲ್ಲೇ ಟ್ವೀಟ್ ಮಾಡಿ ಶುಭಾಶಯಗಳನ್ನು ಕೋರಿದ್ದಾರೆ.
ಇದನ್ನೂ ಓದಿ: ಸಂಕ್ರಾಂತಿ ಸಂಭ್ರಮ: ಇಂದು ಗವಿಗಂಗಾಧರೇಶ್ವರನಿಗೆ ಸೂರ್ಯಾಭಿಷೇಕ!
ಮಕರ ಸಂಕ್ರಾಂತಿಯ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು. ಇದೊಂದು ವಿಶೇಷವಾದ ಹಬ್ಬ ಇದು ಪ್ರತಿಯೊಬ್ಬರ ಜೀವನದಲ್ಲಿ ಆನಂದ ಮತ್ತು ಉತ್ತಮ ಆರೋಗ್ಯ ತರಲಿ ಎಂದು ನಾನು ಆಶಿಸುತ್ತೇನೆಂದು ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ, ಸಮಸ್ತ ನಾಡಿನ ಜನತೆಗೆ ಮಕರ ಸಂಕ್ರಾಂತಿ ಹಬ್ಬದ ಹಾರ್ದಿಕ ಶುಭಾಶಯಗಳು. ಮುಂಬರುವ ದಿನಗಳಲ್ಲಿ ಕರ್ನಾಟಕಕ್ಕೆ ಒಳ್ಳೆಯದಾಗಲಿ, ನಾಡಿನ ಜನತೆಗೆ ಶುಭವಾಗಲಿ. ಎಲ್ಲೆಡೆ ಸುಖ ಶಾಂತಿ, ಸಮೃದ್ಧಿ ನೆಲೆಸುವಂತಾಗಲಿ ಎಂದು ಹಾರೈಸುತ್ತೇನೆಂದು ತಿಳಿಸಿದ್ದಾರೆ.