ಅಸ್ಸಾಂನಲ್ಲಿ ಯಾತ್ರಾರ್ಥಿಗಳ ವಾಹನ-ಟ್ರಕ್ ಮುಖಾಮುಖಿ ಡಿಕ್ಕಿ: ಮೂವರು ಸಾವು, 14 ಮಂದಿಗೆ ಗಾಯ

ಅಸ್ಸಾಂನ ಮೋರಿಗಾಂವ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-37 ರಲ್ಲಿ ಇಂದು ಸೋಮವಾರ ಯಾತ್ರಾರ್ಥಿಗಳನ್ನು ಸಾಗಿಸುತ್ತಿದ್ದ ವಾಹನವು ಟ್ರಕ್‌ಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟು 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮೋರಿಗಾಂವ್: ಅಸ್ಸಾಂನ ಮೋರಿಗಾಂವ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-37 ರಲ್ಲಿ ಇಂದು ಸೋಮವಾರ ಯಾತ್ರಾರ್ಥಿಗಳನ್ನು ಸಾಗಿಸುತ್ತಿದ್ದ ವಾಹನವು ಟ್ರಕ್‌ಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟು 14 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಧರಮ್ತುಲ್ ಎಂಬಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಮೋರಿಗಾಂವ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೃತರಲ್ಲಿ ಒಬ್ಬನನ್ನು ಭೂಪಾಲ್ ಅಧಿಕಾರಿ ಎಂದು ಗುರುತಿಸಲಾಗಿದ್ದು, ಉಳಿದವರ ಗುರುತು ಇನ್ನೂ ಪತ್ತೆಯಾಗಿಲ್ಲ. ನಿನ್ನೆ 'ಮಕರ ಸಂಕ್ರಾಂತಿ' ಸಂದರ್ಭದಲ್ಲಿ ಲೋಹಿತ್ ನದಿಯಲ್ಲಿ ಪವಿತ್ರ ಸ್ನಾನ ಮಾಡಿ ಒಟ್ಟು 17 ಯಾತ್ರಾರ್ಥಿಗಳು ಅರುಣಾಚಲ ಪ್ರದೇಶದ ಪರಶುರಾಮ್ ಕುಂಡಾದಿಂದ ಗುವಾಹಟಿಗೆ ಹಿಂತಿರುಗುತ್ತಿದ್ದರು ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com