ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಗಣರಾಜ್ಯೋತ್ಸವದ ಮುಖ್ಯ ಅತಿಥಿ

ಕೇಂದ್ರ ಸರ್ಕಾರ ಈ ಬಾರಿಯ ಜನವರಿ 26ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್ ಸಿಸಿ ಅವರನ್ನುಆಹ್ವಾನಿಸಲಾಗಿದೆ. ಈ ಮೂಲಕ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧ 75...
ಈಜಿಪ್ಟ್ ಅಧ್ಯಕ್ಷ ಅಬ್ಧೆಲ್ ಫತ್ತಾಹ್
ಈಜಿಪ್ಟ್ ಅಧ್ಯಕ್ಷ ಅಬ್ಧೆಲ್ ಫತ್ತಾಹ್

ನವದೆಹಲಿ: ಕೇಂದ್ರ ಸರ್ಕಾರ ಈ ಬಾರಿಯ ಜನವರಿ 26ರ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಅಲ್ ಸಿಸಿ ಅವರನ್ನುಆಹ್ವಾನಿಸಲಾಗಿದೆ. ಈ ಮೂಲಕ ಉಭಯ ರಾಷ್ಟ್ರಗಳ ನಡುವಿನ ರಾಜತಾಂತ್ರಿಕ ಸಂಬಂಧ 75 ವರ್ಷಗಳನ್ನು ಪೂರೈಸಿದ 'ಮಹತ್ವದ ಸಂದರ್ಭ'ವನ್ನು ಆಚರಿಸಲು, ಪರಸ್ಪರ ಪ್ರೀತಿ, ಸ್ನೇಹವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಔಸಫ್ ಸಯೀದ್ ಅವರು ಸೋಮವಾರ ಹೇಳಿದ್ದಾರೆ.

ಭಾರತ ಮತ್ತು ಈಜಿಪ್ಟ್ ನಡುವಿನ ರಾಜತಾಂತ್ರಿಕ ಬಾಂಧವ್ಯ 75 ವರ್ಷ ಪೂರೈಸಿರುವುದನ್ನು 'ಮಹತ್ವದ ಸಂದರ್ಭ' ಎಂದು ಕರೆದ ಸಯೀದ್, 1947 ಆಗಸ್ಟ್ 15 ರಂದು ಭಾರತಕ್ಕೆ ಸ್ವಾತಂತ್ರ್ಯ ದೊರೆತ ಮೂರು ದಿನಗಳ ನಂತರ ಉಭಯ ರಾಷ್ಟ್ರಗಳು ಅಧಿಕೃತವಾಗಿ ರಾಜತಾಂತ್ರಿಕ ಸಂಬಂಧ ಸ್ಥಾಪಿಸಿದವು ಎಂದು ಅವರು ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಈಜಿಪ್ಟ್ ಅಧ್ಯಕ್ಷ ಅಬ್ದೆಲ್ ಫತ್ತಾಹ್ ಎಲ್-ಸಿಸಿ ಅವರನ್ನು ಗಣರಾಜ್ಯೋತ್ಸವಕ್ಕೆ ಮುಖ್ಯ ಅತಿಥಿಯಾಗಿ ಆಹ್ವಾನಿಸಿದ್ದಾರೆ ಮತ್ತು ಆಹ್ವಾನವನ್ನು ಪ್ರೀತಿಯಿಂದ ಒಪ್ಪಿಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್ 16 ರಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರ ಮೂಲಕ  ಔಪಚಾರಿಕವಾಗಿ ಸಿಸಿ ಅವರಿಗೆ ಆಹ್ವಾನ ನೀಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com