2023ರಲ್ಲಿ ನಡೆಯುವ 9 ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಚಿತಪಡಿಸಿಕೊಳ್ಳಿ: ಜೆಪಿ ನಡ್ಡಾ

2024ರ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಈ ವರ್ಷ ನಡೆಯಲಿರುವ ಒಂಬತ್ತು ರಾಜ್ಯಗಳ ವಿಧಾನಸಭಾ ಚುನಾವಣೆಯು ಕೇಸರಿ ಪಕ್ಷಕ್ಕೆ ಅತ್ಯಂತ ಮಹತ್ವವಾಗಿದ್ದು, ಯಾವುದೇ ರಾಜ್ಯದಲ್ಲೂ ಪಕ್ಷ ಸೋಲದಂತೆ ನೋಡಿಕೊಳ್ಳಬೇಕು...
ಪ್ರಧಾನಿ ಮೋದಿ - ಜೆಪಿ ನಡ್ಡಾ
ಪ್ರಧಾನಿ ಮೋದಿ - ಜೆಪಿ ನಡ್ಡಾ
Updated on

ನವದೆಹಲಿ: 2024ರ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಈ ವರ್ಷ ನಡೆಯಲಿರುವ ಒಂಬತ್ತು ರಾಜ್ಯಗಳ ವಿಧಾನಸಭಾ ಚುನಾವಣೆಯು ಕೇಸರಿ ಪಕ್ಷಕ್ಕೆ ಅತ್ಯಂತ ಮಹತ್ವವಾಗಿದ್ದು, ಯಾವುದೇ ರಾಜ್ಯದಲ್ಲೂ ಪಕ್ಷ ಸೋಲದಂತೆ ನೋಡಿಕೊಳ್ಳಬೇಕು ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು ಸೋಮವಾರ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಹೇಳಿದ್ದಾರೆ.

ದೆಹಲಿಯಲ್ಲಿ ಇಂದಿನಿಂದ ಆರಂಭವಾಗಿರುವ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಣಿ ಸಭೆ ಉದ್ದೇಶಿಸಿ ಜೆಪಿ ನಡ್ಡಾ ಮಾಡಿದ ಭಾಷಣದ ಕುರಿತು ಪಕ್ಷದ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

2024 ರಲ್ಲಿ ಕೇಂದ್ರದಲ್ಲಿ ಮೂರನೇ ಅವಧಿಗೆ ಪಕ್ಷ ಅಧಿಕಾರಕ್ಕೆ ಬರುವುದನ್ನು ಖಚಿತಪಡಿಸಿಕೊಳ್ಳಲು ಆಡಳಿತ ಪಕ್ಷವು ತನ್ನ ಸಂಘಟನೆಯನ್ನು ಬಲಪಡಿಸಲು ಹಲವಾರು ಕಸರತ್ತುಗಳನ್ನು ನಡೆಸುತ್ತಿದೆ.

ನಡ್ಡಾ ಅವರು ತಮ್ಮ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಅಡಿಯಲ್ಲಿ ದೇಶದ ಪ್ರಗತಿಯನ್ನು ಶ್ಲಾಘಿಸಿದರು.

ಇದು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆ, ಮೊಬೈಲ್ ಫೋನ್‌ಗಳ ಎರಡನೇ ಅತಿದೊಡ್ಡ ತಯಾರಕ, ಆಟೋ ವಲಯದಲ್ಲಿ ಮೂರನೇ ಅತಿದೊಡ್ಡ ಉತ್ಪಾದಕವಾಗಿದೆ. ಈ ಹಿಂದೆ ಪ್ರತಿದಿನ 12 ಕಿಮೀ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಿಸಲಾಗುತ್ತಿತ್ತು. ಈಗ ಪ್ರತಿದಿನ 37 ಕಿಮೀ ಹೆದ್ದಾರಿ ನಿರ್ಮಿಸಲಾಗುತ್ತಿದೆ ಎಂದು ಬಿಜೆಪಿ ಅಧ್ಯಕ್ಷರು ಹೇಳಿದ್ದಾರೆ.

ಇತ್ತೀಚಿನ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕೇಸರಿ ಪಕ್ಷದ ಗೆಲುವು "ಅಸಾಧಾರಣ ಮತ್ತು ಐತಿಹಾಸಿಕ" ಎಂದು ಶ್ಲಾಘಿಸಿದ ನಡ್ಡಾ, 182 ಸದಸ್ಯ ಬಲದ ವಿಧಾನಸಭೆಯಲ್ಲಿ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದಿರುವುದು ದೊಡ್ಡ ಸಾಧನೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com