
ಕಟೌಟ್, ಹೋರ್ಡಿಂಗ್ಸ್ ಗಳು
ನವದೆಹಲಿ: ಭಾರತೀಯ ಜನತಾ ಪಕ್ಷದ ವತಿಯಿಂದ ಇಂದು ಸೋಮವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ರೋಡ್ ಶೋ ಆಯೋಜಿಸಿದೆ.
ಇಂದು ಮತ್ತು ನಾಳೆ ದೆಹಲಿಯಲ್ಲಿ ಎರಡು ದಿನಗಳ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯು ಎನ್‌ಡಿಎಂಸಿ ಕನ್ವೆನ್ಷನ್ ಸೆಂಟರ್‌ನಲ್ಲಿ ಆರಂಭಗೊಂಡಿದೆ. ಈ ರಾಷ್ಟ್ರೀಯ ಕಾರ್ಯಕಾರಿಣಿಯ ಭಾಗವಾಗಿ ಇಂದು ಪ್ರಧಾನಿ ಮೋದಿ ರೋಡ್ ಶೋ ನಡೆಯಲಿದ್ದು ಅದರ ಅಂಗವಾಗಿ ಹೋರ್ಡಿಂಗ್ಸ್ ಮತ್ತು ಕಟೌಟ್ ಗಳು ಬೀದಿಗಳಲ್ಲಿ ರಾರಾಜಿಸುತ್ತಿವೆ.
ಮೂಲಗಳ ಪ್ರಕಾರ, ಪ್ರಧಾನಿ ಮೋದಿಯವರು ರಾಷ್ಟ್ರೀಯ ಕಾರ್ಯಕಾರಣಿ ಸಭೆ ನಡೆಯುವ ಸ್ಥಳದವರೆಗೆ ಸುಮಾರು ಒಂದು ಕಿಲೋಮೀಟರ್ ರೋಡ್ ಶೋ ನಡೆಸಲಿದ್ದಾರೆ. ಈ ರೋಡ್ ಶೋ ವೇಳೆ ವಿವಿಧ ರಾಜ್ಯಗಳ ಕಲಾವಿದರು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಲಿದ್ದಾರೆ. ಪಕ್ಷದ ಕಾರ್ಯಕರ್ತರು ರಸ್ತೆಯುದ್ದಕ್ಕೂ ನಿಂತು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲಿದ್ದಾರೆ.
भारतीय जनता पार्टी की 'राष्ट्रीय कार्यकारिणी बैठक' 16 जनवरी से 17 जनवरी तक एनडीएमसी कन्वेंशन सेंटर, नई दिल्ली में होगी।
— BJP (@BJP4India) January 15, 2023
लाइव अपडेट्स के लिए भाजपा के सोशल मीडिया एकाउंट्स से जुड़ें। pic.twitter.com/9bxxSDyaca
ಇಂದು ಬೆಳಗ್ಗೆ ಪಟೇಲ್ ಚೌಕ್ ಮತ್ತು ಸಂಸದ ಮಾರ್ಗದಲ್ಲಿ ಕಂಡುಬಂದದ್ದು ಹೀಗೆ.
Delhi | Hoardings and cut-outs put up by BJP ahead of PM Narendra Modi's road show later today.
— ANI (@ANI) January 16, 2023
Visuals from Patel Chowk area and Sansad Marg. pic.twitter.com/0rjnBlNWHD
ಬಿಜೆಪಿಯ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭವಾಗಿದ್ದು, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಅಧಿಕಾರಾವಧಿ ವಿಸ್ತರಣೆಯನ್ನು ಅನುಮೋದಿಸುವ ಸಾಧ್ಯತೆಯಿದೆ. ಮುಂಬರುವ ವಿಧಾನಸಭೆ ಮತ್ತು ಸಾರ್ವತ್ರಿಕ ಚುನಾವಣೆಗಳಿಗೆ ಅದರ ಕಾರ್ಯತಂತ್ರದ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ.
ರಾಷ್ಟ್ರೀಯ ಅಧ್ಯಕ್ಷರಾಗಿ ನಡ್ಡಾ ಅವರ ಮೂರು ವರ್ಷಗಳ ಅವಧಿ ಇದೇ ತಿಂಗಳಿಗೆ ಕೊನೆಗೊಳ್ಳಲಿದೆ. 2024ರ ಲೋಕಸಭೆ ಚುನಾವಣೆ ಮುಗಿಯುವವರೆಗೆ ಅವರು ಪಕ್ಷವನ್ನು ಮುನ್ನಡೆಸುವ ಸಾಧ್ಯತೆ ಇದೆ. ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆರಂಭಕ್ಕೂ ಮುನ್ನ ಪಕ್ಷದ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ಅವರಿಗಾಗಿ ಪಟೇಲ್ ಚೌಕ್‌ನಿಂದ ಎನ್‌ಡಿಎಂಸಿ ಸಮಾವೇಶ ಕೇಂದ್ರದವರೆಗೆ ರೋಡ್ ಶೋ ಆಯೋಜಿಸಲಾಗಿದೆ.
ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ, ದೇಶ ಎದುರಿಸುತ್ತಿರುವ ಹಲವಾರು ಪ್ರಮುಖ ಸಮಸ್ಯೆಗಳನ್ನು ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದರು. ರಾಜಕೀಯ ಮತ್ತು ಆರ್ಥಿಕ ನಿರ್ಣಯಗಳ ಕುರಿತು ಚರ್ಚೆ ನಡೆಯಲಿದೆ ಎಂದರು..