ಕಾಂಜಾವಾಲ ಪ್ರಕರಣ: ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲು

ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ಅಪಘಾತದಲ್ಲಿ ಕಾರಿನಡಿ ಸಿಲುಕಿದ್ದ 20 ವರ್ಷದ ಯುವತಿಯನ್ನು ಎಳೆದೊಯ್ದು ಹತ್ಯೆಗೈದ ಹಿಟ್ ಅಂಡ್ ರನ್ ಪ್ರಕರಣದ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ...
ಯುವತಿ ಕುಟುಂಬಸ್ಥರಿಂದ ಪ್ರತಿಭಟನೆ
ಯುವತಿ ಕುಟುಂಬಸ್ಥರಿಂದ ಪ್ರತಿಭಟನೆ

ನವದೆಹಲಿ: ಹೊಸ ವರ್ಷದ ದಿನದಂದು ದೆಹಲಿಯ ಕಾಂಜಾವಾಲದಲ್ಲಿ ನಡೆದಿದ್ದ ಭೀಕರ ಅಪಘಾತದಲ್ಲಿ ಕಾರಿನಡಿ ಸಿಲುಕಿದ್ದ 20 ವರ್ಷದ ಯುವತಿಯನ್ನು ಎಳೆದೊಯ್ದು ಹತ್ಯೆಗೈದ ಹಿಟ್ ಅಂಡ್ ರನ್ ಪ್ರಕರಣದ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ದೆಹಲಿ ಸೆಷನ್ಸ್ ನ್ಯಾಯಾಲಯಕ್ಕೆ ಸೋಮವಾರ ತಿಳಿಸಿದ್ದಾರೆ.

ಕಾಂಜಾವಾಲ ಹಿಟ್ ಅಂಡ್ ರನ್ ಪ್ರಕರಣದ ಆರೋಪಿಗಳ ವಿರುದ್ಧ ಪೊಲೀಸರು ಐಪಿಸಿಯ ಸೆಕ್ಷನ್ 302 ಅಡಿ ಕೇಸ್ ದಾಖಲಿಸಲಿದ್ದಾರೆ ಎಂದು ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಅತುಲ್ ಶ್ರೀವಾಸ್ತವ ಅವರು ಕೋರ್ಟ್ ಮಾಹಿತಿ ನೀಡಿದ್ದಾರೆ.

ಕೊಲೆ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಆರೋಪಿಗಳಿಗೆ ಮರಣದಂಡನೆ ಅಥವಾ ಜೀವಾವಧಿಯ ಜೈಲು ಶಿಕ್ಷೆ ಮತ್ತು ದಂಡವನ್ನು ವಿಧಿಸಬಹುದಾಗಿದೆ.

ಪ್ರಕರಣದ ಏಳು ಆರೋಪಿಗಳ ಪೈಕಿ ಆರು ಮಂದಿಯ ಮೇಲೆ ಆರಂಭದಲ್ಲಿ ಕಲಂ 304 ರ ಅಡಿಯಲ್ಲಿ ಕೇಸ್ ದಾಖಲಿಸಲಾಗಿತ್ತು. ಆದರೆ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಮೃತ ಯುವತಿ ಅಂಜಲಿ ಸಿಂಗ್ ಅವರ ಕುಟುಂಬ ಸದಸ್ಯರು ಕಳೆದ ಮಂಗಳವಾರ ಸುಲ್ತಾನ್‌ಪುರಿ ಪೊಲೀಸ್ ಠಾಣೆ ಮುಂದೆ ಧರಣಿ ನಡೆಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com