ಮಹಾರಾಷ್ಟ್ರ: ಥಾಣೆ ಜಿಲ್ಲೆಯಲ್ಲಿ ಕತ್ತು ಸೀಳಿದ ಗಾಳಿಪಟದ ದಾರ, ವ್ಯಕ್ತಿ ಸಾವು

ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಗಾಳಿಪಟದ ದಾರವು ಕುತ್ತಿಗೆ ಸೀಳಿದ್ದರಿಂದ 47 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಥಾಣೆ: ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಗಾಳಿಪಟದ ದಾರವು ಕುತ್ತಿಗೆ ಸೀಳಿದ್ದರಿಂದ 47 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸಂತ್ರಸ್ತ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಈ ಅವಘಡ ಸಂಭವಿಸಿದೆ.

ಭಾನುವಾರ ರಾತ್ರಿ ಭಿವಂಡಿ ನಗರದಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಹಿರಿಯ ಇನ್ಸ್‌ಪೆಕ್ಟರ್ ಸಿ.ಕೆ. ಕಾಕಡೆ ತಿಳಿಸಿದ್ದಾರೆ.

ಉಲ್ಲಾಸನಗರದ ನಿವಾಸಿ ಸಂಜಯ್ ಹಜಾರೆ ಎಂಬುವರು ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಗಾಳಿಪಟದ ದಾರ ಕುತ್ತಿಗೆಗೆ ಸಿಕ್ಕಿಹಾಕಿಕೊಂಡಿದೆ. ಬಳಿಕ ಸಂತ್ರಸ್ತನ ಗಂಟಲು ಸೀಳಿದ್ದು, ಗೋಡೆಗೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com