ಜಾರ್ಖಂಡ್‌: ನಕ್ಸಲರು ಅಡಗಿಸಿಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕ ವಸ್ತುಗಳು ಜಪ್ತಿ

ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಮಾವೋವಾದಿಗಳು ಅಡಗಿಸಿಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕಗಳನ್ನು ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ದುಮ್ಕಾ: ಜಾರ್ಖಂಡ್‌ನ ದುಮ್ಕಾ ಜಿಲ್ಲೆಯಲ್ಲಿ ಮಾವೋವಾದಿಗಳು ಅಡಗಿಸಿಟ್ಟಿದ್ದ ಭಾರೀ ಪ್ರಮಾಣದ ಸ್ಫೋಟಕಗಳನ್ನು ಭದ್ರತಾ ಸಿಬ್ಬಂದಿ ವಶಪಡಿಸಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಭಾನುವಾರ ಸಶಸ್ತ್ರ ಸೀಮಾ ಬಲ ಮತ್ತು ಜಿಲ್ಲಾ ಸಶಸ್ತ್ರ ಪೊಲೀಸರು ಜಂಟಿಯಾಗಿ ಬೃಹತ್ ಶೋಧ ಕಾರ್ಯಾಚರಣೆ ನಡೆಸಿ ಕರ್ಕಟ್ಟಾ ಪಹಾಡ್‌ನಲ್ಲಿ ಮಣ್ಣಿನಡಿಯಲ್ಲಿ ಅಡಗಿಸಿಟ್ಟಿದ್ದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಂಬರ ಲಾಕ್ರಾ ಮಾಹಿತಿ ನೀಡಿದ್ದಾರೆ.

ವಶಪಡಿಸಿಕೊಂಡ ಸ್ಫೋಟಕಗಳಲ್ಲಿ 200 ಜಿಲೆಟಿನ್ ತುಂಡುಗಳು, 411 ಡಿಟೋನೇಟರ್‌ಗಳು, ಕೋಡೆಕ್ಸ್ ವೈರ್, 18 ಪೀಪಲ್ಸ್ ಲಿಬರೇಶನ್ ಗೆರಿಲ್ಲಾ ಆರ್ಮಿ ಬ್ಯಾಡ್ಜ್‌ಗಳು, 31 ಪೀಸ್ ಮಾವೋ ಬ್ಯಾಡ್ಜ್‌ಗಳು ಮತ್ತು 27 ಸಂಖ್ಯೆಯ ‘ನಯಾ ಪ್ರಭಾತ್’(ಮಾವೋವಾದಿ ಪುಸ್ತಕ) ಸೇರಿವೆ ಎಂದು ಎಸ್‌ಪಿ ತಿಳಿಸಿದ್ದಾರೆ.

ಪೊಲೀಸರು ಐಪಿಸಿ, ಯುಪಿಎ ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಲಾಕ್ರಾ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com