ಉತ್ತರ ಪ್ರದೇಶ: ಬಾಲಕಿ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಮಾಡಿದ ಇಬ್ಬರು ಅಪ್ರಾಪ್ತರು

ಇಬ್ಬರು ಅಪ್ರಾಪ್ತ ಬಾಲಕರು ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ತಮ್ಮ ಕೃತ್ಯದ ವೀಡಿಯೊ ಮಾಡಿದ್ದಾರೆ ಮತ್ತು ಈ ಬಗ್ಗೆ ಯಾರಿಗಾದರೂ ಹೇಳಿದರೆ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವುದಾಗಿ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on: 

ಮಥುರಾ: ಇಬ್ಬರು ಅಪ್ರಾಪ್ತ ಬಾಲಕರು ಒಂಬತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ತಮ್ಮ ಕೃತ್ಯದ ವೀಡಿಯೊ ಮಾಡಿದ್ದಾರೆ ಮತ್ತು ಈ ಬಗ್ಗೆ ಯಾರಿಗಾದರೂ ಹೇಳಿದರೆ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂತ್ರಸ್ತೆಯ ಸಂಬಂಧಿಕರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಹೆದ್ದಾರಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್(ಎಸ್‌ಎಚ್‌ಒ) ಛೋಟೆ ಲಾಲ್ ಹೇಳಿದ್ದಾರೆ.

ಸಂಬಂಧಿಕರ ಪ್ರಕಾರ, ಶನಿವಾರ ಸಂಜೆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದಾಗ ಘಟನೆ ನಡೆದಿದೆ. ನೆರೆಹೊರೆಯಲ್ಲಿ ವಾಸಿಸುವ ಈ ಹುಡುಗರು ಬಾಲಕಿಯ ಮನೆಗೆ ನುಗ್ಗಿ ಲೈಂಗಿಕ ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ. ಆಕೆ ವಿರೋಧಿಸಿದಾಗ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿಗಳು ಘಟನೆಯ ವೀಡಿಯೊವನ್ನು ಸಹ ಮಾಡಿದ್ದಾರೆ ಮತ್ತು ಸಂತ್ರಸ್ತೆ ಈ ಬಗ್ಗೆ ಯಾರಿಗಾದರೂ ಹೇಳಿದರೆ ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com