ಮಹಾರಾಷ್ಟ್ರದಲ್ಲಿ ದಿನಕ್ಕೆ ಒಂದು ಕೋಟಿ ಮೊಟ್ಟೆ ಕೊರತೆ: ಅಧಿಕಾರಿಗಳು

ದಿನಕ್ಕೆ 1 ಕೋಟಿ ಮೊಟ್ಟೆಗಳ ಕೊರತೆ ಎದುರಿಸುತ್ತಿರುವ ಮಹಾರಾಷ್ಟ್ರದಲ್ಲಿ ಮೊಟ್ಟೆ ಉತ್ಪಾದನೆಯನ್ನು ಹೆಚ್ಚಿಸಲು ರಾಜ್ಯ ಪಶುಸಂಗೋಪನಾ ಇಲಾಖೆ ಯೋಜನೆಯನ್ನು ರೂಪಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಔರಂಗಾಬಾದ್: ದಿನಕ್ಕೆ 1 ಕೋಟಿ ಮೊಟ್ಟೆಗಳ ಕೊರತೆ ಎದುರಿಸುತ್ತಿರುವ ಮಹಾರಾಷ್ಟ್ರದಲ್ಲಿ ಮೊಟ್ಟೆ ಉತ್ಪಾದನೆಯನ್ನು ಹೆಚ್ಚಿಸಲು ರಾಜ್ಯ ಪಶುಸಂಗೋಪನಾ ಇಲಾಖೆ ಯೋಜನೆಯನ್ನು ರೂಪಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ದಿನಕ್ಕೆ 2.25 ಕೋಟಿ ಮೊಟ್ಟೆಗಳನ್ನು ಬಳಸಲಾಗುತ್ತದೆ ಮತ್ತು ದಿನಕ್ಕೆ 1 ಕೋಟಿ ಮೊಟ್ಟೆಗಳ ಕೊರತೆಯನ್ನು ಎದುರಿಸುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

ರಾಜ್ಯವು ದಿನಕ್ಕೆ 1-1.25 ಮೊಟ್ಟೆಗಳನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ ಮತ್ತು ರಾಜ್ಯದ ಅಗತ್ಯವನ್ನು ಪೂರೈಸಲು ಇಲಾಖೆಯು ಯೋಜನೆಯನ್ನು ರೂಪಿಸುತ್ತಿದೆ ಎಂದು ಪಶುಸಂಗೋಪನೆ ಇಲಾಖೆಯ ಹೆಚ್ಚುವರಿ ಆಯುಕ್ತ ಡಾ. ಧನಂಜಯ ಪರ್ಕಳೆ ಪಿಟಿಐಗೆ ತಿಳಿಸಿದ್ದಾರೆ.

ಸದ್ಯ ಮೊಟ್ಟೆ ಕೊರತೆ ನೀಗಿಸಲು ಕರ್ನಾಟಕ, ತೆಲಂಗಾಣ, ತಮಿಳುನಾಡಿನಿಂದ ಮೊಟ್ಟೆ ಖರೀದಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

"ಪಶುಸಂಗೋಪನಾ ಇಲಾಖೆಯು ಉತ್ಪಾದನೆಯನ್ನು ಹೆಚ್ಚಿಸಲು ಪ್ರತಿ ಜಿಲ್ಲೆಗೆ 1,000 ಗೂಡುಗಳೊಂದಿಗೆ 50 ಬಿಳಿ ಲೆಘೋರ್ನ್ ಕೋಳಿಗಳನ್ನು 21,000 ರೂಪಾಯಿ ಸಬ್ಸಿಡಿ ದರದಲ್ಲಿ ನೀಡಲು ಯೋಜಿಸಿದೆ" ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com