ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಅಪ್ಪಿಕೊಳ್ಳಲು ಯತ್ನಿಸಿದ ವ್ಯಕ್ತಿ
ಭಾರತ್ ಜೋಡೋ ಯಾತ್ರೆ ವೇಳೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಅಪ್ಪಿಕೊಳ್ಳಲು ಯತ್ನಿಸಿದ ವ್ಯಕ್ತಿ

ಪಂಜಾಬ್‌: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿಯನ್ನು ಅಪ್ಪಿಕೊಳ್ಳಲು ಯತ್ನಿಸಿದ ವ್ಯಕ್ತಿ

ಮಂಗಳವಾರ ಇಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ವ್ಯಕ್ತಿಯೊಬ್ಬರು ರಾಹುಲ್ ಗಾಂಧಿಯತ್ತ ಧಾವಿಸಿ ಅವರನ್ನು ತಬ್ಬಿಕೊಳ್ಳಲು ಪ್ರಯತ್ನಿಸಿದರು. ಆದರೆ, ಅವರೊಂದಿಗೆ ಇದ್ದ ಇತರ ಕಾಂಗ್ರೆಸ್ ನಾಯಕರು ವ್ಯಕ್ತಿಯನ್ನು ತಳ್ಳಿದ್ದಾರೆ.
Published on

ಹೋಶಿಯಾರ್‌ಪುರ: ಮಂಗಳವಾರ ಇಲ್ಲಿ ನಡೆದ ಭಾರತ್ ಜೋಡೋ ಯಾತ್ರೆಯಲ್ಲಿ ವ್ಯಕ್ತಿಯೊಬ್ಬರು ರಾಹುಲ್ ಗಾಂಧಿಯತ್ತ ಧಾವಿಸಿ ಅವರನ್ನು ತಬ್ಬಿಕೊಳ್ಳಲು ಪ್ರಯತ್ನಿಸಿದರು. ಆದರೆ, ಅವರೊಂದಿಗೆ ಇದ್ದ ಇತರ ಕಾಂಗ್ರೆಸ್ ನಾಯಕರು ವ್ಯಕ್ತಿಯನ್ನು ತಳ್ಳಿದ್ದಾರೆ.
ಆದರೆ, ಇದು ಭದ್ರತೆಯ ಉಲ್ಲಂಘನೆಯಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ವಿಡಿಯೋದಲ್ಲಿ, ಜಾಕೆಟ್ ಧರಿಸಿದ್ದ ವ್ಯಕ್ತಿಯೊಬ್ಬರು ರಾಹುಲ್ ಗಾಂಧಿ ಅವರ ಕಡೆಗೆ ಧಾವಿಸಿ ಅವರನ್ನು ಅಪ್ಪಿಕೊಳ್ಳಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ಆದರೆ, ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಮತ್ತು ಇತರ ಪಕ್ಷದ ಕಾರ್ಯಕರ್ತರು ಆತನನ್ನು ತಡೆದರು ಮತ್ತು ದೂರ ತಳ್ಳಿದರು.

ಕಾಂಗ್ರೆಸ್ ಕಳೆದ ತಿಂಗಳು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆದಿತ್ತು, ರಾಷ್ಟ್ರ ರಾಜಧಾನಿಯಲ್ಲಿ ಯಾತ್ರೆಯ ಸಮಯದಲ್ಲಿ 'ಭದ್ರತಾ ಉಲ್ಲಂಘನೆ'ಯಾಗಿದೆ ಎಂದು ಆರೋಪಿಸಿತ್ತು ಮತ್ತು ಯಾತ್ರೆಯಲ್ಲಿ ಭಾಗವಹಿಸುವ ರಾಹುಲ್ ಗಾಂಧಿ ಮತ್ತು ಇತರರ ಭದ್ರತೆಗಾಗಿ ತಕ್ಷಣವೇ ಕ್ರಮಗಳನ್ನು ಕೈಗೊಳ್ಳಲು ಒತ್ತಾಯಿಸಿತ್ತು.

ಆರೋಪಗಳನ್ನು ತಳ್ಳಿಹಾಕಿದ ಸರ್ಕಾರವು ರಾಹುಲ್ ಗಾಂಧಿಗೆ 'ಸಂಪೂರ್ಣ' ನಿಗದಿಪಡಿಸಿದ ಮಾರ್ಗಸೂಚಿಗಳಿಗೆ ಅನುಸಾರವಾಗಿ ಭದ್ರತಾ ವ್ಯವಸ್ಥೆಗಳನ್ನು ಒದಗಿಸಲಾಗಿದೆ. ಆದರೆ, ಅವರೇ ಸ್ವತಃ 2020 ರಿಂದ 113 ಬಾರಿ ಭದ್ರತಾ ನಿಯಮಗಳನ್ನು 'ಉಲ್ಲಂಘಿಸಿದ್ದಾರೆ' ಎಂದು ಹೇಳಿತ್ತು.

ಕೊರೆಯುವ ಚಳಿಯ ನಡುವೆ ಪಂಜಾಬ್ ಭಾಗವಾಗಿ ಮಂಗಳವಾರ ಬೆಳಗ್ಗೆ ಇಲ್ಲಿನ ತಾಂಡಾದಿಂದ ಯಾತ್ರೆ ಪುನರಾರಂಭವಾಯಿತು. ರಾತ್ರಿ ಮುಕೇರಿಯನ್‌ನಲ್ಲಿ ಯಾತ್ರೆ ತಂಗಲಿದೆ.

ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಪ್ರಾರಂಭವಾದ ಮೆರವಣಿಗೆ ಜನವರಿ 30 ರೊಳಗೆ ಶ್ರೀನಗರದಲ್ಲಿ ಮುಕ್ತಾಯಗೊಳ್ಳಲಿದ್ದು, ಜಮ್ಮು ಮತ್ತು ಕಾಶ್ಮೀರದ ರಾಜಧಾನಿಯಲ್ಲಿ ರಾಹುಲ್ ಗಾಂಧಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ.

ಯಾತ್ರೆಯು ಈವರೆಗೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ, ಉತ್ತರ ಪ್ರದೇಶ ಮತ್ತು ಹರಿಯಾಣವನ್ನು ಪೂರೈಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com