ಭಾರತ್ ಜೋಡೋ ಯಾತ್ರೆಗೆ ಯಾವುದೇ ಬೆದರಿಕೆ ಇಲ್ಲ: ಜಮ್ಮು ಮತ್ತು ಕಾಶ್ಮೀರ ಡಿಜಿಪಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಗೆ ಬೆದರಿಕೆ ಇರುವ ಬಗ್ಗೆ ಯಾವುದೇ ಗುಪ್ತಚರ ಮಾಹಿತಿ ಇಲ್ಲ ಮತ್ತು ಯಾತ್ರೆ ಕೇಂದ್ರಾಡಳಿತ ಪ್ರದೇಶ ತಲುಪಿದಾಗ ಸೂಕ್ತ ಭದ್ರತೆ ಒದಗಿಸಲಾಗುವುದು...
ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ
ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ

ಶ್ರೀನಗರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ 'ಭಾರತ್ ಜೋಡೋ ಯಾತ್ರೆ'ಗೆ ಬೆದರಿಕೆ ಇರುವ ಬಗ್ಗೆ ಯಾವುದೇ ಗುಪ್ತಚರ ಮಾಹಿತಿ ಇಲ್ಲ ಮತ್ತು ಯಾತ್ರೆ ಕೇಂದ್ರಾಡಳಿತ ಪ್ರದೇಶ ತಲುಪಿದಾಗ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ.

ಯಾತ್ರೆಯು ಪಂಜಾಬ್‌ನಿಂದ ಒಂದು ಅಥವಾ ಎರಡು ದಿನಗಳಲ್ಲಿ ಜಮ್ಮು ಪ್ರವೇಶಿಸಲಿದೆ.

ಕೆಲವು ದಿನಗಳ ಕಾಲ ಜಮ್ಮುವಿನ ವಿವಿಧ ಜಿಲ್ಲೆಗಳಲ್ಲಿ ಯಾತ್ರೆ ನಡೆಯಲಿದ್ದು, ಬಳಿಕ ಕಾಶ್ಮೀರ ಕಣಿವೆಯನ್ನು ಪ್ರವೇಶಿಸಲಿದೆ. ಮೂರ್ನಾಲ್ಕು ದಿನಗಳ ಕಾಲ ಕಾಶ್ಮೀರದಲ್ಲಿ ಯಾತ್ರೆ ನಡೆಯಲಿದೆ.

ಸೆಪ್ಟೆಂಬರ್ 7 ರಂದು ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆ ಶ್ರೀನಗರದಲ್ಲಿ ರಾಹುಲ್ ಗಾಂಧಿ ಅವರ ರಾಷ್ಟ್ರಧ್ವಜಾರೋಹಣದೊಂದಿಗೆ ಮುಕ್ತಾಯಗೊಳ್ಳಲಿದೆ.

ಇಲ್ಲಿಯವರೆಗೆ ತಮಿಳುನಾಡು, ಕೇರಳ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ, ಉತ್ತರ ಪ್ರದೇಶ, ಹರಿಯಾಣ ಮತ್ತು ಪಂಜಾಬ್ ನಲ್ಲಿ ಯಾತ್ರೆ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com