ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಶೀಘ್ರವೇ ಇ-ವಲಸೆ ಪ್ರಕ್ರಿಯೆ
ಕೇಂದ್ರ ಸರ್ಕಾರ ವಲಸೆ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸಲು ಮುಂದಾಗಿದ್ದು, ಇದಕ್ಕಾಗಿ ವಿಮಾನ ನಿಲ್ದಾಣಗಳಲ್ಲಿ ಬಯೋಮೆಟ್ರಿಕ್ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳುವುದಕ್ಕೆ ನಿರ್ಧರಿಸಿದೆ.
Published: 19th January 2023 03:54 PM | Last Updated: 19th January 2023 03:55 PM | A+A A-

ವಿಮಾನ ನಿಲ್ದಾಣ (ಸಂಗ್ರಹ ಚಿತ್ರ)
ನವದೆಹಲಿ: ಕೇಂದ್ರ ಸರ್ಕಾರ ವಲಸೆ ಪ್ರಕ್ರಿಯೆಯನ್ನು ಡಿಜಿಟಲೀಕರಣಗೊಳಿಸಲು ಮುಂದಾಗಿದ್ದು, ಇದಕ್ಕಾಗಿ ವಿಮಾನ ನಿಲ್ದಾಣಗಳಲ್ಲಿ ಬಯೋಮೆಟ್ರಿಕ್ ತಂತ್ರಜ್ಞಾನವನ್ನು ಬಳಕೆ ಮಾಡಿಕೊಳ್ಳುವುದಕ್ಕೆ ನಿರ್ಧರಿಸಿದೆ.
ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ಪ್ರಯಾಣವನ್ನು ಸುಲಭಗೊಳಿಸುವ ನಿಟ್ಟಿನಲ್ಲಿ ಈ ಸೌಲಭ್ಯವನ್ನು ಜಾರಿಗೊಳಿಸಲಾಗುತ್ತಿದೆ ಎಂದು ಪ್ರಯಾಣಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿದ್ದಾರೆ.
ಇದನ್ನೂ ಓದಿ: 35 ಪ್ರಯಾಣಿಕರನ್ನು ನಿಲ್ದಾಣದಲ್ಲಿಯೇ ಬಿಟ್ಟು ಹಾರಿದ ವಿಮಾನ: ಡಿಜಿಸಿಎಯಿಂದ ತನಿಖೆಗೆ ಆದೇಶ
ದೆಹಲಿ ಹಾಗೂ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಕಳೆದ ತಿಂಗಳು ಹೆಚ್ಚು ಜನದಟ್ಟಣೆಯನ್ನು ಕಂಡಿತ್ತು. ಪ್ರಸ್ತುತ ಅಂತಾರಾಷ್ಟ್ರೀಯ ಪ್ರಯಾಣಿಕರಿಗೆ ವಲಸೆ ಅನುಮತಿ ಪ್ರಕ್ರಿಯೆಯನ್ನು ಗೃಹ ಸಚಿವಾಲಯದ ಸಿಬ್ಬಂದಿಗಳ ಬ್ಯೂರೋ ಆಫ್ ಇಮಿಗ್ರೇಷನ್‌ನ ಅಧಿಕಾರಿಗಳ ಮೂಲಕ ನಡೆಸಲಾಗುತ್ತಿದೆ.
ಜಗತ್ತಿನ ಹಲವು ವಿಮಾನ ನಿಲ್ದಾಣಗಳಲ್ಲಿ ವಲಸೆ ಅನುಮತಿ ಪ್ರಕ್ರಿಯೆಗೆ ಬಯೋಮೆಟ್ರಿಕ್ ವ್ಯವಸ್ಥೆ ಹೊಂದಿರುವ ಸ್ವಯಂ ಚಾಲಿತ ಲೇನ್ ಗಳನ್ನು ಬಳಕೆ ಮಾಡಲಾಗುತ್ತಿದೆ.