ಡಬ್ಲ್ಯುಎಫ್‌ಐ ಅಧ್ಯಕ್ಷರನ್ನು ವಜಾಗೊಳಿಸಿ, ಲೈಂಗಿಕ ಕಿರುಕುಳ ಕೇಸ್ ದಾಖಲಿಸಬೇಕು: ಪ್ರತಿಪಕ್ಷಗಳ ಆಗ್ರಹ
ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್‌ಐ)ದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಜ್ ಭೂಷಣ್ ಶರಣ್ ಸಿಂಗ್ ಅವರನ್ನು ವಜಾಗೊಳಿಸಬೇಕು ಮತ್ತು ಮಹಿಳಾ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅವರ ವಿರುದ್ಧ ಎಫ್‌ಐಆರ್...
Published: 19th January 2023 07:39 PM | Last Updated: 19th January 2023 08:05 PM | A+A A-

ಬ್ರಜ್ ಭೂಷಣ್ ಶರಣ್ ಸಿಂಗ್
ಲಖನೌ: ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್‌ಐ)ದ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಜ್ ಭೂಷಣ್ ಶರಣ್ ಸಿಂಗ್ ಅವರನ್ನು ವಜಾಗೊಳಿಸಬೇಕು ಮತ್ತು ಮಹಿಳಾ ಆಟಗಾರರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಎಂದು ಪ್ರತಿಪಕ್ಷಳಾದ ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಗುರುವಾರ ಒತ್ತಾಯಿಸಿವೆ.
ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತ, ದೇಶದ ಅಗ್ರ ಮಹಿಳಾ ಕುಸ್ತಿಪಟುಗಳಲ್ಲಿ ಒಬ್ಬರಾದ ವಿನೇಶ್ ಫೋಗಟ್, ಭಾರತೀಯ ಕುಸ್ತಿ ಫೆಡರೇಶನ್(ಡಬ್ಲ್ಯುಎಫ್‌ಐ) ಅಧ್ಯಕ್ಷ ಸಿಂಗ್ ಅವರು ವರ್ಷಗಳಿಂದ ಮಹಿಳಾ ಕುಸ್ತಿಪಟುಗಳನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಆದರೆ ಈ ಆರೋಪವನ್ನು ಬಿಜೆಪಿ ನಾಯಕ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ಈ ಸಂಬಂಧ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಮಾಜವಾದಿ ಪಕ್ಷದ ವಕ್ತಾರ ಸುನೀಲ್ ಸಿಂಗ್ ಸಜನ್, ‘‘ದೇಶಕ್ಕಾಗಿ ಒಲಿಂಪಿಕ್ಸ್ ಮತ್ತು ಇತರ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮಹಿಳೆಯರು ಇಂದು ತಮಗಾಗುತ್ತಿರುವ ಲೈಂಗಿಕ ಕಿರುಕುಳದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಸುದ್ದಿಗಿಂತ ಆತಂಕಕಾರಿಯಾದದ್ದು ಮತ್ತೊಂದು ಇಲ್ಲ ಎಂದಿದ್ದಾರೆ.
ಇದನ್ನು ಓದಿ: ಡಬ್ಲ್ಯುಎಫ್‌ಐ ಅಧ್ಯಕ್ಷರು, ಕೋಚ್ ವಿರುದ್ಧ ಲೈಂಗಿಕ ಕಿರುಕುಳ ದೂರುಗಳು ಗಂಭೀರ: ಕಾಮನ್ ವೆಲ್ತ್ ಗೇಮ್ ಕೋಚ್ ಪ್ರವೀಣ್ ದಹಿಯಾ
"ಪ್ರಧಾನಿ ನರೇಂದ್ರ ಮೋದಿಯವರು ಈ ವಿಷಯದ ಬಗ್ಗೆ ಗಮನಹರಿಸಿ ಬ್ರಜ್ ಭೂಷಣ್ ಸಿಂಗ್ ಅವರನ್ನು ತಕ್ಷಣವೇ ವಜಾಗೊಳಿಸಬೇಕೆಂದು ನಾನು ವಿನಂತಿಸುತ್ತೇನೆ. ಅಲ್ಲದೆ, ಅವರ ವಿರುದ್ಧ ಎಫ್ಐಆರ್ ದಾಖಲಿಸಬೇಕು ಮತ್ತು ಸರಿಯಾದ ತನಿಖೆ ನಡೆಸಬೇಕು ಎಂದು ಎಸ್ ಪಿ ನಾಯಕ ಒತ್ತಾಯಿಸಿದರು.
ಉತ್ತರ ಪ್ರದೇಶ ಕಾಂಗ್ರೆಸ್ ಕೂಡ ಸಿಂಗ್ ಬ್ರಜ್ ಭೂಷಣ್ ಸಿಂಗ್ ಅವರನ್ನು ಡಬ್ಲ್ಯುಎಫ್‌ಐ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದೆ. ಮಹಿಳೆಯರ ಮೇಲಿನ ಅಪರಾಧಗಳ ಬಗ್ಗೆ ಬಿಜೆಪಿ ನಿಜವಾಗಿಯೂ ಗಂಭೀರವಾಗಿದೆ ಎಂಬುದನ್ನು ಸಾಬೀತುಪಡಿಸುವ ಸಮಯ ಬಂದಿದೆ ಎಂದು ಹೇಳಿದೆ.
ಲಖನೌನಲ್ಲಿ ಪಿಟಿಐ ಜೊತೆ ಮಾತನಾಡಿದ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಮತ್ತು ಮಾಜಿ ಸಚಿವ ನಕುಲ್ ದುಬೆ, "ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಜ್ ಭೂಷಣ್ ಸಿಂಗ್ ಅವರನ್ನು ಕೂಡಲೇ ವಜಾಗೊಳಿಸಬೇಕು ಮತ್ತು ಸೂಕ್ತ ತನಿಖೆಗಾಗಿ ಎಫ್‌ಐಆರ್ ದಾಖಲಿಸಬೇಕು. ಅಲ್ಲದೆ, ಬಿಜೆಪಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಂಡು 'ಬೇಟಿ ಬಚಾವೋ' ಘೋಷಣೆ ಕೇವಲ ಪ್ರಚಾರಕ್ಕಾಗಿ ಅಲ್ಲ ಎಂಬುದನ್ನು ಸಾಬೀತುಪಡಿಸಬೇಕು ಎಂದಿದ್ದಾರೆ.