ಲೆಫ್ಟಿನೆಂಟ್ ಗವರ್ನರ್ ಅವರದ್ದು ಡರ್ಟಿ ಪಾಲಿಟಿಕ್ಸ್ -ಕ್ರೇಜಿವಾಲ್: ದೆಹಲಿ ಸಿಎಂ ಅವರಿಂದ ಕೀಳು ಮಟ್ಟದ ಆರೋಪ- ವಿ.ಕೆ ಸಕ್ಸೇನಾ!

ನಗರದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸಲು ಕ್ರಮಗಳನ್ನು ಕೈಗೊಳ್ಳುವ ಬದಲು ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಕೊಳಕು ರಾಜಕಾರಣ ಮಾಡುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ಕೇಜ್ರಿವಾಲ್ ಮತ್ತು ವಿ.ಕೆ ಸಕ್ಸೇನಾ
ಕೇಜ್ರಿವಾಲ್ ಮತ್ತು ವಿ.ಕೆ ಸಕ್ಸೇನಾ

ದೆಹಲಿ: ನಗರದ ಕಾನೂನು ಮತ್ತು ಸುವ್ಯವಸ್ಥೆಯನ್ನು ಸುಧಾರಿಸಲು ಕ್ರಮಗಳನ್ನು ಕೈಗೊಳ್ಳುವ ಬದಲು ಲೆಫ್ಟಿನೆಂಟ್ ಗವರ್ನರ್ ವಿ ಕೆ ಸಕ್ಸೇನಾ ಅವರು ಕೊಳಕು ರಾಜಕಾರಣ ಮಾಡುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.

ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರು ರಾತ್ರಿ ತಪಾಸಣೆ ನಡೆಸುತ್ತಿದ್ದಾಗ ಕುಡುಕನೊಬ್ಬ ಕಿರುಕುಳ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದ ಒಂದು ದಿನದ ನಂತರ ಅವರ ಹೇಳಿಕೆ ಹೊರಬಿದ್ದಿದೆ .

ಉಭಯ ಪಕ್ಷಗಳ ನಡುವೆ ಹೆಚ್ಚುತ್ತಿರುವ ಜಗಳದ ಮಧ್ಯೆ, ಯಾವುದೇ ಅಧಿಕಾರವಿಲ್ಲದಿದ್ದರೂ ಎಲ್‌ಜಿ ಸರ್ಕಾರಿ ಅಧಿಕಾರಿಗಳೊಂದಿಗೆ ಸರಣಿ ಸಭೆಗಳನ್ನು ಕರೆದಿದ್ದಾರೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ವೇಗವಾಗಿ ಹದಗೆಡುತ್ತಿದೆ. ಲೆಫ್ಟಿನೆಂಟ್ ಗವರ್ನರ್  ಅದನ್ನು ಸುಧಾರಿಸಲು ಕ್ರಮಗಳನ್ನು ತೆಗೆದುಕೊಳ್ಳುವ ಬದಲು, ಕೊಳಕು ರಾಜಕೀಯದಲ್ಲಿ ನಿರತವಾಗಿದ್ದಾರೆ.

ದೆಹಲಿ ಸರ್ಕಾರಿ ಅಧಿಕಾರಿಗಳ ಸರಣಿ ಸಭೆಗಳನ್ನು ಕರೆದಿದ್ದಾರೆ, ಆದರೆ ಸಭೆ ಕರೆಯುವ ಯಾವುದೇ ಅಧಿಕಾರ ಅವರಿಗಿಲ್ಲ ಎಂದು ಕೇಜ್ರಿವಾಲ್  ದೂರಿದ್ದಾರೆ. ಚುನಾಯಿತ ಸರ್ಕಾರದ ಕಾರ್ಯಚಟುವಟಿಕೆಯಲ್ಲಿ ಮಧ್ಯಪ್ರವೇಶಿಸಿ ಕೊಳಕು ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ಇನ್ನೂ ಕೇಜ್ರಿವಾಲ್ ಆರೋಪಗಳಿಗೆ ಸಂಬಂಧಿಸಿದಂತೆ ಪತ್ರ ಬರೆದಿರುವ ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ, ತಮ್ಮ ವಿರುದ್ಧ ಕೇಜ್ರಿವಾಲ್ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ, ಜನವರಿ 16 ರಂದು ತಮ್ಮ ಉಪ ಮನೀಷ್ ಸಿಸೋಡಿಯಾ ಮತ್ತು ಎಎಪಿ ಶಾಸಕರೊಂದಿಗೆ ರಾಜ್ ನಿವಾಸ್‌ಗೆ ನಡೆದ ಮೆರವಣಿಗೆಯಲ್ಲಿ ಕೇಜ್ರಿವಾಲ್  ರಾಜಕೀಯ ಮಾಡುತ್ತಿದ್ದಾರೆ. ಕೇಜ್ರಿವಾಲ್ ಅವರನ್ನು ಸಭೆಗೆ ಆಹ್ವಾನಿಸಿದ್ದೇನೆ ಎಂದು ಸಕ್ಸೇನಾ ಹೇಳಿದ್ದಾರೆ. ಆದರೆ ಮುಖ್ಯಮಂತ್ರಿಗಳು ತಮ್ಮ ಎಲ್ಲಾ ಶಾಸಕರೊಂದಿಗೆ ಭೇಟಿಯಾಗಬೇಕೆಂಬ ನೆಪದಲ್ಲಿ ಬರದಿರಲು ನಿರ್ಧರಿಸಿದರು ಎಂದು ಹೇಳಿದ್ದಾರೆ.

ಕೇಜ್ರಿವಾಲ್ ಆರೋಪಗಳಿಗೆ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಪತ್ರದ ಮೂಲಕ ಉತ್ತರಿಸಿದ್ದಾರೆ. ಕೇಜ್ರಿವಾಲ್ ಆರೋಪಗಳು ದಾರಿ ತಪ್ಪಿಸುವ, ಅವಹೇಳನಕಾರಿ ಮತ್ತು ಕೀಳುಮಟ್ಟದವುಗಳಾಗಿವೆ ಎಂದು ಅವರು ಹೇಳಿದ್ದಾರೆ.

ಫಿನ್‌ಲ್ಯಾಂಡ್‌ಗೆ ಶಿಕ್ಷಕರ ತರಬೇತಿ ಪ್ರವಾಸವನ್ನು ಲೆಫ್ಟಿನೆಂಟ್ ಗವರ್ನರ್ ತಡೆ ಹಿಡಿದಿದ್ದಾರೆ ಎಂದು ಆರೋಪಿಸಿ ಅವರ ಕಚೇರಿವರೆಗೆ ಶಾಸಕರ ಜೊತೆ ಕೇಜ್ರಿವಾಲ್, ಪ್ರತಿಭಟನಾ ಮೆರವಣಿಗೆ ನಡೆಸಿದ್ದರು. ಬಳಿಕ, ಶಾಸಕರ ಭೇಟಿಗೂ ಗವರ್ನರ್ ನಿರಾಕರಿಸಿದರು ಎಂಬ ಕೇಜ್ರಿವಾಲ್ ಆರೋಪವನ್ನು ಪ್ರಮುಖವಾಗಿ ಸಕ್ಸೇನಾ ಪ್ರಸ್ತಾಪಿಸಿದ್ದಾರೆ.

ನನ್ನನ್ನು ಭೇಟಿ ಮಾಡಲು ಕೇಜ್ರಿವಾಲ್ ಅವರಿಗೆ ಆಹ್ವಾನ ನೀಡಿದ್ದೆ. ಆದರೆ, ಅವರು ಎಲ್ಲ ಶಾಸಕರ ಜೊತೆಗೇ ಭೇಟಿ ಮಾಡಬೇಕೆಂದುಕೊಂಡಿದ್ದೇನೆ ಎಂದು ಹೇಳುವ ಮೂಲಕ ಭೇಟಿಗೆ ಬರಲಿಲ್ಲ ಎಂದಿದ್ದಾರೆ.

ಕೇಜ್ರಿವಾಲ್ ಅವರ ದಿಢೀರ್ ಬೇಡಿಕೆ, ಕಡಿಮೆ ಸಮಯ ಇದ್ದುದರಿಂದ ಹಾಗೂ ಒಟ್ಟೊಟ್ಟಿಗೆ 70–80 ಶಾಸಕರ ಭೇಟಿಗೆ ಸೂಕ್ತ ಕಾರಣವೂ ನೀಡದ್ದರಿಂದ ಭೇಟಿಗೆ ಅವಕಾಶ ನೀಡಲಾಗಿಲ್ಲ ಎಂದು ಸಕ್ಸೇನಾ ಸ್ಪಷ್ಟನೆ ನೀಡಿದ್ದಾರೆ.

‘ಈ ವಿಷಯವನ್ನು ನೀವು ರಾಜಕೀಯಕ್ಕೆ ಅನುಕೂಲಕರವಾಗುವಂತೆ ‘ಲೆಫ್ಟಿನೆಂಟ್ ಗವರ್ನರ್ ನನ್ನ ಭೇಟಿಗೆ ನಿರಾಕರಿಸಿದರು’ ಎಂದು ಹೇಳಿಕೆ ನೀಡಿರುವುದು ದುರದೃಷ್ಟಕರ’ ಎಂದಿದ್ದಾರೆ.

‘ನಗರದಲ್ಲಿ ಗಂಭೀರ ಅಭಿವೃದ್ಧಿ ಸಮಸ್ಯೆಗಳು ಇರುವಾಗ ನೀವು ನನ್ನನ್ನು ಭೇಟಿಯಾಗಿ ಅವುಗಳಿಗೆ ಪರಿಹಾರ ಕಂಡುಹಿಡಿಯುವುದನ್ನು ಬಿಟ್ಟು ಪ್ರತಿಭಟನೆ ನಡೆಸುತ್ತಿರುವುದನ್ನು ಕಂಡು ನಾನು ಬೆರಗಾಗಿದ್ದೇನೆ’ ಎಂದು ಲೆ. ಗವರ್ನರ್ ಸೂಚ್ಯವಾಗಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com