ಡಬ್ಲ್ಯೂಎಫ್ಐ ವಿಸರ್ಜಿಸಿ; ಸಮಸ್ಯೆ ಪರಿಹಾರಕ್ಕಾಗಿ ತೆಗೆದುಕೊಂಡ ಕ್ರಮಗಳೇನು: ಪ್ರಧಾನಿ ಮೋದಿಗೆ ಕಾಂಗ್ರೆಸ್ ಪ್ರಶ್ನೆ

ಬಿಜೆಪಿ ಸಂಸದ, ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಲೈಂಗಿಕ ಕಿರುಕುಳ ಆರೋಪ ಸಂಬಂಧ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಪರವಾಗಿ ಧ್ವನಿ ಎತ್ತಿರುವ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಕಾಂಗ್ರೆಸ್ ಸುದ್ದಿಗೋಷ್ಠಿ
ಕಾಂಗ್ರೆಸ್ ಸುದ್ದಿಗೋಷ್ಠಿ

ನವದೆಹಲಿ: ಬಿಜೆಪಿ ಸಂಸದ, ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸಿಂಗ್ ಲೈಂಗಿಕ ಕಿರುಕುಳ ಆರೋಪ ಸಂಬಂಧ ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಪರವಾಗಿ ಧ್ವನಿ ಎತ್ತಿರುವ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಈ ಬಗ್ಗೆ ಪ್ರಧಾನಿ ಮೋದಿ ಹಾಗೂ ಅವರ ಸಂಪುಟದ ಸಚಿವರ ಮೌನವನ್ನು ಪ್ರಶ್ನಿಸಿದೆ. 

ಘಟನೆ ನಡೆದು 72 ಗಂಟೆಗಳಿಗಿಂತ ಹೆಚ್ಚು ಸಮಯ ಕಳೆದರೂ ಇದುವರೆಗೆ ಯಾವುದೇ ಕ್ರಮವನ್ನು ಪ್ರಾರಂಭಿಸದಿರುವುದು ಅಭೂತಪೂರ್ವವಾಗಿದೆ. ಕೇಂದ್ರ ಸರ್ಕಾರ ಮತ್ತು ಪ್ರಧಾನಿಯ ಮೌನವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಇಲ್ಲಿವರೆಗೂ ಈ ವಿಷಯದ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ನಾವು ಅಜಯ್ ಮಿಶ್ರಾ ಪ್ರಕರಣದಲ್ಲಿ ಇದೇ ಮಾದರಿಯನ್ನು ನೋಡಿದ್ದು ಈಗ ಈ ಡಬ್ಲ್ಯುಎಫ್‌ಐ ಅಧ್ಯಕ್ಷ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಪ್ರಕರಣದಲ್ಲಿಯೂ ಇದೇ ನಡೆಯುತ್ತಿದೆ ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನತೆ ಹೇಳಿದ್ದಾರೆ.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ವಿರುದ್ಧದ ವಿಷಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವರು ಮಧ್ಯಪ್ರವೇಶಿಸಬೇಕೆಂದು ಎಂದು ಒತ್ತಾಯಿಸಿ ಸತತ ಮೂರನೇ ದಿನದಿಂದಲೂ ರಾಷ್ಟ್ರ ರಾಜಧಾನಿಯಲ್ಲಿ ಕುಸ್ತಿಪಟುಗಳು ಮುಷ್ಕರ ನಡೆಸುತ್ತಿದ್ದಾರೆ. ಭಾರತೀಯ ಕುಸ್ತಿ ಫೆಡರೇಶನ್‌ನಲ್ಲಿ ಬಿಜೆಪಿಯ ಕೈಸರ್‌ಗಂಜ್ ಸಂಸದರ ದಬ್ಬಾಳಿಕೆ ಸಂಸ್ಕೃತಿಯ ವಿರುದ್ಧ ಕುಸ್ತಿಪಟು ವಿನೇಶ್ ಫೋಗಟ್ ಮಾತನಾಡಿದ್ದರು. 

ಬಾಕ್ಸರ್‌ಗಳಾದ ವಿಜೇಂದರ್ ಮತ್ತು ಕೃಷ್ಣ ಪೂನಿಯಾ ಜೊತೆ ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿ ನಡೆಸಿದ್ದರು. ಇಂದು ಬೆಳಗ್ಗೆ ಜಂತರ್ ಮಂತರ್‌ನಲ್ಲಿ ವಿಜೇಂದರ್ ಸಿಂಗ್ ಆಟಗಾರರೊಂದಿಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡರು. ನಾನು ಕ್ರೀಡಾ ಪಟುವಾಗಿ ಜಂತರ್ ಮಂತರ್‌ಗೆ ಹೋಗಿದ್ದೆ, ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧದ ಆರೋಪಗಳು ತುಂಬಾ ಪ್ರಬಲವಾಗಿವೆ. ಪ್ರಧಾನಿ ಮೌನವಾಗಿರುವುದು ಅತ್ಯಂತ ಖಂಡನೀಯ. ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕು. ಅಥ್ಲೀಟ್‌ಗಳಿಗೆ ಅರ್ಥವಾಗುವಂತೆ ಫೆಡರೇಶನ್‌ನ ಭಾಗವಾಗಿದ್ದರೆ ಒಳ್ಳೆಯದು ಎಂದು ಅವರು ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com