ಪ್ರಧಾನಿ ಮೋದಿ ಬಿಬಿಸಿ ಡಾಕ್ಯುಮೆಂಟರಿ ಕುರಿತ ಟ್ವೀಟ್ ಗಳಿಗೆ ಕೇಂದ್ರ ಸರ್ಕಾರ ನಿರ್ಬಂಧ

ಜಗತ್ತೀನಾದ್ಯಂತ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಂಸ್ಥೆಯ ಸಾಕ್ಷ್ಯಚಿತ್ರದ ವ್ಯಾಪಕ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಇತ್ತ ಕೇಂದ್ರ ಸರ್ಕಾರ ಬಿಬಿಸಿ ಡಾಕ್ಯುಮೆಂಟರಿ ಕುರಿತ ಟ್ವೀಟ್ ಗಳಿಗೆ ನಿರ್ಬಂಧ ಹೇರಿದೆ.
ಪ್ರಧಾನಿ ಮೋದಿ ಮತ್ತು ಬಿಬಿಸಿ ಸಾಕ್ಷ್ಯಚಿತ್ರ
ಪ್ರಧಾನಿ ಮೋದಿ ಮತ್ತು ಬಿಬಿಸಿ ಸಾಕ್ಷ್ಯಚಿತ್ರ
Updated on

ನವದೆಹಲಿ: ಜಗತ್ತೀನಾದ್ಯಂತ ಪ್ರಧಾನಿ ಮೋದಿ ಕುರಿತ ಬಿಬಿಸಿ ಸಂಸ್ಥೆಯ ಸಾಕ್ಷ್ಯಚಿತ್ರದ ವ್ಯಾಪಕ ಚರ್ಚೆಯಾಗುತ್ತಿರುವ ಹೊತ್ತಿನಲ್ಲೇ ಇತ್ತ ಕೇಂದ್ರ ಸರ್ಕಾರ ಬಿಬಿಸಿ ಡಾಕ್ಯುಮೆಂಟರಿ ಕುರಿತ ಟ್ವೀಟ್ ಗಳಿಗೆ ನಿರ್ಬಂಧ ಹೇರಿದೆ.

ಹೌದು.. ಪ್ರಧಾನಿ ಮೋದಿ ಕುರಿತ ವಿಮರ್ಶಾತ್ಮಕ ಬಿಬಿಸಿ ಸಾಕ್ಷ್ಯಚಿತ್ರ ಕುರಿತ ಟ್ವೀಟ್‌ಗಳನ್ನು ಕೇಂದ್ರ ಸರ್ಕಾರ ಶನಿವಾರ ನಿರ್ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.  2002ರ ಗುಜರಾತ್ ಗಲಭೆ ಮತ್ತು ಪ್ರಧಾನಿ ನರೇಂದ್ರ ಮೋದಿ ಕುರಿತ ಬಿಬಿಸಿ ಸಾಕ್ಷ್ಯಚಿತ್ರದ ಲಿಂಕ್‌ಗಳನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರವು ಟ್ವಿಟರ್ ಮತ್ತು ಯೂಟ್ಯೂಬ್‌ಗೆ ಆದೇಶಿಸಿದೆ ಎಂದು ಹೇಳಲಾಗಿದೆ.

"ಇಂಡಿಯಾ: ದಿ ಮೋದಿ ಕ್ವಷ್ಚನ್" ಎಂಬ ಶೀರ್ಷಿಕೆಯ ಸಾಕ್ಷ್ಯಚಿತ್ರದ ಅನೇಕ ಟ್ವೀಟ್‌ಗಳು ಮತ್ತು ಯೂಟ್ಯೂಬ್ ವೀಡಿಯೊಗಳು ಇನ್ನು ಮುಂದೆ ಮೈಕ್ರೋಬ್ಲಾಗಿಂಗ್ ಮತ್ತು ವೀಡಿಯೊ-ಹಂಚಿಕೆ ವೆಬ್‌ಸೈಟ್‌ಗಳಲ್ಲಿ ಕಾಣಿಸುವುದಿಲ್ಲ ಎನ್ನಲಾಗಿದೆ. ಮಾಹಿತಿ ಮತ್ತು ಪ್ರಸಾರ (I&B) ಸಚಿವಾಲಯವು BBC ಯ ಸಾಕ್ಷ್ಯಚಿತ್ರದ ಮೊದಲ ಸಂಚಿಕೆಯನ್ನು ನಿರ್ಬಂಧಿಸಲು ಈ ಎರಡೂ ಸಾಮಾಜಿಕ ಮಾಧ್ಯಮ ದೈತ್ಯ ಸಂಸ್ಥೆಗಳಿಗೆ ಸೂಚಿಸಿತ್ತು. ಬ್ರಿಟನ್‌ನ ರಾಷ್ಟ್ರೀಯ ಪ್ರಸಾರಕರಿಂದ ಸಾಕ್ಷ್ಯಚಿತ್ರದಲ್ಲಿನ 50 ಕ್ಕೂ ಹೆಚ್ಚು ಟ್ವೀಟ್‌ಗಳನ್ನು ತೆಗೆದುಹಾಕಲು ಸಚಿವಾಲಯ ಟ್ವಿಟರ್‌ಗೆ ತಿಳಿಸಿದೆ. ಹೀಗೆ ಟ್ವಿಟರ್ ನಿಂದ ತೆಗೆದು ಹಾಕಲ್ಪಟ್ಟ ಟ್ವೀಟ್ ಗಳಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ'ಬ್ರಿಯಾನ್ ಅವರು ಸಾಕ್ಷ್ಯಚಿತ್ರದ ಕುರಿತು ಮಾಡಿದ್ದ ಟ್ವೀಟ್  ಕೂಡ ಸೇರಿದೆ ಎನ್ನಲಾಗಿದೆ.

ಕೆಲವರು ಸಾಕ್ಷ್ಯಚಿತ್ರವನ್ನು ಅಪ್‌ಲೋಡ್ ಮಾಡಿದರೆ ಅಥವಾ ಮತ್ತೊಮ್ಮೆ ಟ್ವೀಟ್ ಮಾಡಿದರೆ ಅದರ ತಾಜಾ ಲಿಂಕ್‌ಗಳನ್ನು ತೆಗೆದುಹಾಕುವಂತೆ ಕೇಂದ್ರವು ಯೂಟ್ಯೂಬ್ ಮತ್ತು ಟ್ವಿಟರ್‌ಗೆ ತಿಳಿಸಿದೆ

ಮಾಹಿತಿ ತಂತ್ರಜ್ಞಾನ ನಿಯಮಗಳು, 2021 ರ ಅಡಿಯಲ್ಲಿ ತುರ್ತು ಅಧಿಕಾರವನ್ನು ಬಳಸಿಕೊಂಡು ಲಿಂಕ್‌ಗಳನ್ನು ತೆಗೆದುಹಾಕಲು I&B ಸಚಿವಾಲಯವು ಆದೇಶ ನೀಡಿದೆ. YouTube ಮತ್ತು Twitter ಎರಡೂ ಸಂಸ್ಥೆಗಳು ಸರ್ಕಾರದ ಆದೇಶವನ್ನು ಅನುಸರಿಸಲು ಒಪ್ಪಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಭಾರತ ವಿರೋಧ
ಇನ್ನು ಬಿಬಿಸಿ ಸಾಕ್ಷ್ಯಚಿತ್ರಕ್ಕೆ ಭಾರತ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸಾಕ್ಷ್ಯಚಿತ್ರವನ್ನು "ಪ್ರಚಾರದ ತುಣುಕು"... ಇದು ವಸ್ತುನಿಷ್ಠತೆಯ ಕೊರತೆ ಮತ್ತು ವಸಾಹತುಶಾಹಿ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕಿಡಿಕಾರಿದೆ. ಇದು ಸುಪ್ರೀಂ ಕೋರ್ಟ್‌ನ ಅಧಿಕಾರ ಮತ್ತು ವಿಶ್ವಾಸಾರ್ಹತೆಯ ಮೇಲೆ ದುಷ್ಪರಿಣಾಮಗಳನ್ನು ಬಿತ್ತರಿಸಲು, ಭಾರತದಲ್ಲಿನ ಸಮುದಾಯಗಳ ನಡುವೆ ವಿಭಜನೆಯನ್ನು ಬಿತ್ತಲು ಮತ್ತು ಕ್ರಮಗಳ ಮೇಲೆ ಆಧಾರರಹಿತ ಆರೋಪಗಳನ್ನು ಮಾಡುವ ಪ್ರಯತ್ನವಾಗಿದೆ ಎಂದೂ ಹೇಳಿದೆ.

ಫೆಬ್ರವರಿ 2002 ರಲ್ಲಿ ಗಲಭೆ ಭುಗಿಲೆದ್ದಾಗ ಗುಜರಾತ್ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ಮೋದಿ ಅವರು ತಪ್ಪು ಎಸಗಿದ್ದರು ಎಂಬುದಕ್ಕೆ ಸುಪ್ರೀಂ ಕೋರ್ಟ್ ನೇಮಿಸಿದ ತನಿಖೆಯಲ್ಲಿ ಯಾವುದೇ ಪುರಾವೆಗಳು ಕಂಡುಬಂದಿಲ್ಲ.
 

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com