ಜಮ್ಮು-ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ಭೀಕರ ಅಪಘಾತ: ಐವರು ಸಾವು, 15 ಮಂದಿಗೆ ಗಾಯ
ಜಮ್ಮು-ಕಾಶ್ಮೀರದ ಕಥುವಾದಲ್ಲಿ ಕಳೆದ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಜಿಲ್ಲೆಯ ಬಿಲ್ಲವೆರ್ ಪ್ರದೇಶದ ಧನು ಪರೊಲೆ ಗ್ರಾಮದಲ್ಲಿ ಆಳವಾದ ಕಂದಕಕ್ಕೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ಸು ಉರುಳಿಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿ ಐವರು ಮೃತಪಟ್ಚಿದ್ದು 15 ಮಂದಿ ಗಾಯಗೊಂಡಿದ್ದಾರೆ.
Published: 21st January 2023 10:13 AM | Last Updated: 21st January 2023 10:13 AM | A+A A-

ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿರುವುದು
ಕಥುವಾ: ಜಮ್ಮು-ಕಾಶ್ಮೀರದ ಕಥುವಾದಲ್ಲಿ ಕಳೆದ ತಡರಾತ್ರಿ ಭೀಕರ ಅಪಘಾತ ಸಂಭವಿಸಿದೆ. ಜಿಲ್ಲೆಯ ಬಿಲ್ಲವೆರ್ ಪ್ರದೇಶದ ಧನು ಪರೊಲೆ ಗ್ರಾಮದಲ್ಲಿ ಆಳವಾದ ಕಂದಕಕ್ಕೆ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ಸು ಉರುಳಿಬಿದ್ದ ಪರಿಣಾಮ ಓರ್ವ ಮಹಿಳೆ ಸೇರಿ ಐವರು ಮೃತಪಟ್ಚಿದ್ದು 15 ಮಂದಿ ಗಾಯಗೊಂಡಿದ್ದಾರೆ.
ಖಾಸಗಿ ಮಿನಿ ಬಸ್ಸು ಚಾಲಕ ನಿಯಂತ್ರಣ ತಪ್ಪಿದ ಪರಿಣಾಮ ತಿರುವಿನಲ್ಲಿ ಆಯತಪ್ಪಿ ಕಂದಕಕ್ಕೆ ಉರುಳಿಬಿದ್ದಿದೆ. ಮೊಂಡ್ಲಿ ಗ್ರಾಮದಿಂದ ಧನು ಪರೊಲೆ ಗ್ರಾಮಕ್ಕೆ ಮಿನಿ ಬಸ್ಸು ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
60 ವರ್ಷದ ಮಹಿಳೆ ಸೇರಿ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟರೆ, ಉಳಿದ 16 ಮಂದಿಯನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಾಯಿಸಲಾಯಿತು. ಆದರೂ ಅಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.