ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 140 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 140 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,960ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.
ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ
ಕೋವಿಡ್-19 ಸೋಂಕು ಪತ್ತೆ ಪರೀಕ್ಷೆ

ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 140 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 1,960ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,46,81,921ಕ್ಕೆ ಏರಿಕೆಯಾಗಿದೆ. ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಮೇಘಾಲಯದಲ್ಲಿ ಒಬ್ಬರು ಮತ್ತು ಗುಜರಾತ್‌ನಲ್ಲಿ ಇಬ್ಬರು ಸೇರಿದಂತೆ ಈವರೆಗೆ 5,30,733 ಮಂದಿ ಸಾವಿಗೀಡಾಗಿದ್ದಾರೆ.

ದೈನಂದಿನ ಪಾಸಿಟಿವಿಟಿ ದರ ಶೇ 0.10 ಮತ್ತು ವಾರದ ಪಾಸಿಟಿವಿಟಿ ದರ ಶೇ 0.08ರಷ್ಟಿದೆ. ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.01 ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

ಸದ್ಯ ದೇಶದಲ್ಲಿ ಈವರೆಗೆ 4,41,49,228 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ದೇಶದಾದ್ಯಂತ ನಡೆಯುತ್ತಿರುವ ಲಸಿಕಾ ಅಭಿಯಾನದ ಅಡಿಯಲ್ಲಿ ಒಟ್ಟು 220.28 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com