ಈ ಬಾರಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ 23 ಸ್ತಬ್ಧ ಚಿತ್ರಗಳ ಪ್ರದರ್ಶನ- ರಕ್ಷಣಾ ಸಚಿವಾಲಯ
ನವದೆಹಲಿಯ ಕರ್ತವ್ಯ ಪಥದಲ್ಲಿ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ದೇಶದ ವಿಭಿನ್ನ ಸಂಸ್ಕೃತಿ, ಆಚಾರ, ವಿಚಾರ, ಕಲೆ, ಸಾಹಿತ್ಯ ಬಿಂಬಿಸುವ 23 ಸ್ತಬ್ಧ ಚಿತ್ರಗಳ ಪ್ರದರ್ಶನ ಇರಲಿದೆ.
Published: 22nd January 2023 08:11 PM | Last Updated: 22nd January 2023 08:13 PM | A+A A-

ಕರ್ನಾಟಕದ ನಾರಿಶಕ್ತಿ ಸ್ತಬ್ಧ ಚಿತ್ರ
ನವದೆಹಲಿ: ನವದೆಹಲಿಯ ಕರ್ತವ್ಯ ಪಥದಲ್ಲಿ ಜನವರಿ 26 ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ದೇಶದ ವಿಭಿನ್ನ ಸಂಸ್ಕೃತಿ, ಆಚಾರ, ವಿಚಾರ, ಕಲೆ, ಸಾಹಿತ್ಯ ಬಿಂಬಿಸುವ 23 ಸ್ತಬ್ಧ ಚಿತ್ರಗಳ ಪ್ರದರ್ಶನ ಇರಲಿದೆ.
17 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ವಿವಿಧ ಸಚಿವಾಲಯಗಳು, ಇಲಾಖೆಗಳ ಒಟ್ಟಾರೇ 23 ಸ್ತಬ್ಧ ಚಿತ್ರಗಳು ಪ್ರದರ್ಶನದಲ್ಲಿ ಪಾಲ್ಗೊಳ್ಳಲಿವೆ ಎಂದು ರಕ್ಷಣಾ ಸಚಿವಾಲಯ ಭಾನುವಾರ ತಿಳಿಸಿದೆ.
ಕರ್ನಾಟಕ, ತಮಿಳುನಾಡು, ಆಂಧ್ರ ಪ್ರದೇಶ, ಕೇರಳ, ಮಹಾರಾಷ್ಟ್ರ, ಉತ್ತರಾಖಂಡ್,. ಜಾರ್ಖಂಡ್, ಉತ್ತರ ಪ್ರದೇಶ, ಹರಿಯಾಣ, ಗುಜರಾತ್, ಅಸ್ಸಾಂ, ಅರುಣಾಚಲ ಪ್ರದೇಶ ,ತ್ರಿಪುರಾ, ಪಶ್ಚಿಮ ಬಂಗಾಳ ರಾಜ್ಯದಿಂದ ಮತ್ತು ಜಮ್ಮು-ಕಾಶ್ಮೀರ, ಲಡಾಖ್, ದಾದರ್ ನಗರ್ ಹವೇಲಿ ಮತ್ತು ದಾಮನ್, ಡಿಯೂ ನಿಂದ ಒಟ್ಟಾರೇ 17 ಸ್ತಬ್ಧ ಚಿತ್ರಗಳು ಸಾಗುವ ಮೂಲಕ ವಿವಿಧತೆಯಲ್ಲಿ ಏಕತೆಯನ್ನು ಪ್ರತಿಬಿಂಬಿಸಲಿವೆ.
17 tableaux from Assam, Arunachal Pradesh, Tripura, West Bengal, Jammu & Kashmir, Ladakh, Dadar Nagar Haveli & Daman & Diu, Gujarat, Haryana, Uttar Pradesh, Uttarakhand, Jharkhand, Maharashtra, Andhra Pradesh, Tamil Nadu, Karnataka and Kerala will be showcased during parade.
— ANI (@ANI) January 22, 2023
ಕರ್ನಾಟಕದ ನಾರಿಶಕ್ತಿ ಸ್ತಬ್ಧ ಚಿತ್ರ ಈ ಬಾರಿಯ ಗಣರಾಜ್ಯೋತ್ಸವ ಪರೇಡ್ ನಲ್ಲಿ ಸಾಗುವ ಮೂಲಕ ರಾಜ್ಯದಲ್ಲಿನ ನಾರಿಶಕ್ತಿಯನ್ನು ದೇಶಕ್ಕೆ ಪರಿಚಯ ಮಾಡಿಕೊಡಲಿದೆ.