ಟೆಕ್ ಸಂಸ್ಥೆಗಳಲ್ಲಿನ ಸಾಮೂಹಿಕ ಉದ್ಯೋಗ ಕಡಿತದ ಬಗ್ಗೆ ಗಮನಹರಿಸಿ, ಸರಿಯಾದ ಕ್ರಮ ತೆಗೆದುಕೊಳ್ಳಿ: ಅರವಿಂದ್ ಕೇಜ್ರಿವಾಲ್

ಹಲವಾರು ಟೆಕ್ ಸಂಸ್ಥೆಗಳ ಸಾಮೂಹಿಕ ಉದ್ಯೋಗ ಕಡಿತಗಳ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ದೇಶದ ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವನ್ನು ಕೇಳಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್

ನವದೆಹಲಿ: ಹಲವಾರು ಟೆಕ್ ಸಂಸ್ಥೆಗಳ ಸಾಮೂಹಿಕ ಉದ್ಯೋಗ ಕಡಿತಗಳ ಬಗ್ಗೆ ತಮ್ಮ ಕಳವಳವನ್ನು ವ್ಯಕ್ತಪಡಿಸಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು, ದೇಶದ ಪರಿಸ್ಥಿತಿಯನ್ನು ನಿರ್ಣಯಿಸಲು ಮತ್ತು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರವನ್ನು ಕೇಳಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹಲವಾರು ಬಹುರಾಷ್ಟ್ರೀಯ ಕಂಪನಿಗಳು ಉದ್ಯೋಗಿಗಳನ್ನು ತೆಗೆದು ಹಾಕಿದ್ದೇ ಅಮೆರಿಕ ಮತ್ತು ಇತರ ದೇಶಗಳಲ್ಲಿಯೂ ಉದ್ಯೋಗ ಕಡಿತಕ್ಕೆ ಕಾರಣವಾಯಿತು. 

ಐಟಿ ವಲಯದಿಂದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ವಂಚಿತರಾಗುತ್ತಿದ್ದಾರೆ. ಕೇಂದ್ರ ಸರ್ಕಾರವು ಭಾರತದ ಪರಿಸ್ಥಿತಿಯನ್ನು ಅವಲೋಕಿಸಬೇಕು ಮತ್ತು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಕೇಜ್ರಿವಾಲ್ ಹಿಂದಿ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ತಿಂಗಳ ಆರಂಭದಲ್ಲಿ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಕಂಪನಿಯು 10,000 ಅಥವಾ ಅದರ ಒಟ್ಟು ಉದ್ಯೋಗಿಗಳ ಶೇ 5ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಲಿದೆ. ಜಾಗತಿಕ ಆರ್ಥಿಕ ಅನಿಶ್ಚಿತತೆಯ ನಡುವೆ ಟೆಕ್ ದೈತ್ಯ 'ಪರಿಣಾಮಕಾರಿ ಕಂಪನಿ' ಆಗಿ ಉಳಿಯಲು ಇದು ಕಠಿಣ ಆಯ್ಕೆಯಾಗಿದೆ ಎಂದು ಹೇಳಿದರು. 

ಫೇಸ್‌ಬುಕ್ ಮತ್ತು ಅಮೆಜಾನ್ ನಂತರ ಮೈಕ್ರೋಸಾಫ್ಟ್ ಇತ್ತೀಚಿನ ಸಂಸ್ಥೆಯಾಗಿದ್ದು, 2023ರಲ್ಲಿ ತಂತ್ರಜ್ಞಾನ ಕ್ಷೇತ್ರದಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡಿದೆ.

ಸದ್ಯದ ಸಾಂಕ್ರಾಮಿಕದ ಸಮಯವನ್ನು ಮಹತ್ವದ ಬದಲಾವಣೆಯ ಅವಧಿ ಎಂದು ವಿವರಿಸುತ್ತಾ, ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ ತಮ್ಮ ಡಿಜಿಟಲ್ ವೆಚ್ಚವನ್ನು ಹೆಚ್ಚಿಸಿದ ಗ್ರಾಹಕರು ಈಗ ಕಡಿಮೆ ವೆಚ್ಚದಲ್ಲಿ ಹೆಚ್ಚಿನದನ್ನು ಮಾಡಲು ನೋಡುತ್ತಿದ್ದಾರೆ ಎಂದು ಭಾರತೀಯ ಮೂಲದ ನಾದೆಲ್ಲಾ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com