ಕೇಂದ್ರ ಬಜೆಟ್: ಈ ಬಾರಿ ರೈಲ್ವೆ ಅನುದಾನದಲ್ಲಿ ಶೇ.20-25 ರಷ್ಟು ಹೆಚ್ಚಳ ಸಾಧ್ಯತೆ
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು ಮಂಡಿಸಲಿರುವ 2023-24ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ಯೋಜನೆಗಳಿಗೆ ಮತ್ತು ಆಧುನೀಕರಣ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ನೀಡುವ ಸಾಧ್ಯತೆ ಇದೆ.
Published: 23rd January 2023 04:52 PM | Last Updated: 30th January 2023 04:52 PM | A+A A-

ವಂದೇ ಭಾರತ್ ಎಕ್ಸ್ ಪ್ರೆಸ್
ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆಬ್ರವರಿ 1ರಂದು ಮಂಡಿಸಲಿರುವ 2023-24ನೇ ಸಾಲಿನ ಕೇಂದ್ರ ಬಜೆಟ್‌ನಲ್ಲಿ ರೈಲ್ವೆ ಯೋಜನೆಗಳಿಗೆ ಮತ್ತು ಆಧುನೀಕರಣ ಕಾಮಗಾರಿಗಳಿಗೆ ಹೆಚ್ಚಿನ ಅನುದಾನ ನೀಡುವ ಸಾಧ್ಯತೆ ಇದೆ.
ಮುಂಬರುವ ಬಜೆಟ್‌ನಲ್ಲಿ ಹೊಸ ವಂದೇ ಭಾರತ್ ಮತ್ತು ಹೈಡ್ರೋಜನ್ ಚಾಲಿತ ಪ್ಯಾಸೆಂಜರ್ ರೈಲುಗಳು ಸೇರಿದಂತೆ ಹೊಸ ರೈಲುಗಳು ಘೋಷಣೆಯಾಗುವ ಸಾಧ್ಯತೆ ಇದೆ.
ಮೂಲಗಳ ಪ್ರಕಾರ, ಇಡೀ ರೈಲ್ವೆ ವ್ಯವಸ್ಥೆಯ ಮೂಲಸೌಕರ್ಯವನ್ನು ಹೆಚ್ಚಿಸಲು ಮೋದಿ ಸರ್ಕಾರ ರೈಲ್ವೆ ಬಜೆಟ್ ಅನ್ನು ಶೇ. 20-25 ರಷ್ಟು ಹೆಚ್ಚಿಸಲು ಮುಂದಾಗಿದೆ.
ಇದನ್ನು ಓದಿ: ವಂದೇ ಭಾರತ್ ರೈಲುಗಳ ವಿನ್ಯಾಸ ವಿಮಾನಕ್ಕಿಂತಲೂ ಉತ್ತಮ: ಅಶ್ವಿನಿ ವೈಷ್ಣವ್
ಮೋದಿ ಸರ್ಕಾರ ಈ ಬಾರಿ 400ಕ್ಕೂ ಹೆಚ್ಚು ವಂದೇ ಭಾರತ್ ರೈಲುಗಳ ಮತ್ತು ಮೂರು ಡಜನ್‌ಗಿಂತಲೂ ಹೆಚ್ಚು ಹೈಡ್ರೋಜನ್-ಚಾಲಿತ ಪ್ರಯಾಣಿಕ ರೈಲುಗಳನ್ನು ಘೋಷಿಸಬಹುದು.
"ಪ್ರಧಾನಿ ನರೇಂದ್ರ ಮೋದಿ ಅವರು 2023ರ ಆಗಸ್ಟ್ 15 ರಂದು ದೇಶವನ್ನುದ್ದೇಶಿಸಿ ಮಾಡುವ ಭಾಷಣದಲ್ಲಿ ಹೈಡ್ರೋಜನ್ ಚಾಲಿತ ರೈಲುಗಳನ್ನು ಘೋಷಿಸುವ ಸಾಧ್ಯತೆ ಇದೆ. ಜೊತೆಗೆ ಭಾರತೀಯ ರೈಲ್ವೆಯ ಇತ್ತೀಚಿನ ಸಾಧನೆಗಳನ್ನು ಎತ್ತಿ ತೋರಿಸಲಿದ್ದಾರೆ" ಎಂದು ಮೂಲಗಳು ತಿಳಿಸಿವೆ.