ಅಸಭ್ಯ ವರ್ತನೆ: ಪ್ರಯಾಣಿಕನನ್ನು ವಿಮಾನದಿಂದ ಇಳಿಸಿದ ಸ್ಪೈಸ್ ಜೆಟ್ ಸಿಬ್ಬಂದಿ! ವಿಡಿಯೋ
ವಿಮಾನದಲ್ಲಿನ ಮಹಿಳಾ ಸಿಬ್ಬಂದಿಯೊಬ್ಬರೊಂದಿಗೆ ಅನುಚಿತ ವರ್ತನೆಯಿಂದಾಗಿ ಪ್ರಯಾಣಿಕರೊಬ್ಬರನ್ನು ಸ್ಪೈಸ್ ಜೆಟ್ ವಿಮಾನದಿಂದ ಕೆಳಗೆ ಇಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.
Published: 23rd January 2023 09:28 PM | Last Updated: 27th January 2023 04:21 PM | A+A A-

ವಿಮಾನದಲ್ಲಿ ವಾಕ್ಸಮರದ ಚಿತ್ರ
ನವದೆಹಲಿ: ವಿಮಾನದಲ್ಲಿನ ಮಹಿಳಾ ಸಿಬ್ಬಂದಿಯೊಬ್ಬರೊಂದಿಗೆ ಅನುಚಿತ ವರ್ತನೆಯಿಂದಾಗಿ ಪ್ರಯಾಣಿಕರೊಬ್ಬರನ್ನು ಸ್ಪೈಸ್ ಜೆಟ್ ವಿಮಾನದಿಂದ ಕೆಳಗೆ ಇಳಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಸೋಮವಾರ ಹೇಳಿಕೆಯಲ್ಲಿ ತಿಳಿಸಿದೆ.
ಮಹಿಳಾ ಸಿಬ್ಬಂದಿಯೊಂದಿಗೆ ಪುರುಷ ಪ್ರಯಾಣಿಕ ಅನುಚಿತವಾಗಿ ವರ್ತಿಸಿದ ಆರೋಪದ ನಂತರ ಉಂಟಾದ ಮಾತಿನ ಚಕಮಕಿಯನ್ನು ವಿಮಾನದ ಸಿಬ್ಬಂದಿ ಹಾಗೂ ಪ್ರಯಾಣಿಕರನ್ನು ನೋಡುತ್ತಿರುವ ವಿಡಿಯೋವನ್ನು ಎಎನ್ ಐ ಸುದ್ದಿಸಂಸ್ಥೆ ಹಂಚಿಕೊಂಡಿದೆ. ನಂತರ ಪ್ರಯಾಣಿಕವನ್ನು ವಿಮಾನದಿಂದ ಕೆಳಗೆ ಇಳಿಸಲಾಗಿದೆ. ದೆಹಲಿ- ಹೈದ್ರಾಬಾದ್ ಮಾರ್ಗದ ಎಸ್ ಜಿ-8133 ವಿಮಾನದಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ಕುಡಿದ ಅಮಲಿನಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ: ನ್ಯೂಯಾರ್ಕ್-ದೆಹಲಿ ಏರ್ ಇಂಡಿಯಾ ವಿಮಾನದಲ್ಲಿ ಘಟನೆ!
#WATCH | "Unruly & inappropriate" behaviour by a passenger on the Delhi-Hyderabad SpiceJet flight at Delhi airport today
— ANI (@ANI) January 23, 2023
The passenger and & a co-passenger were deboarded and handed over to the security team at the airport pic.twitter.com/H090cPKjWV
ದೆಹಲಿಯಲ್ಲಿ ವಿಮಾನ ಹತ್ತುವಾಗ, ಪುರುಷ ಪ್ರಯಾಣಿಕನೊಬ್ಬ ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡಿದ್ದಾರೆ. ವಿಮಾನದ ಸಿಬ್ಬಂದಿ ಈ ವಿಷಯವನ್ನು ಭದ್ರತಾ ಸಿಬ್ಬಂದಿಯ ಗಮನಕ್ಕೆ ತಂದಿದ್ದಾರೆ. ಬಳಿಕ ಅವರನ್ನು ಕೆಳಗಿಳಿಸಿ, ಭದ್ರತಾ ತಂಡದ ವಶಕ್ಕೆ ನೀಡಲಾಯಿತು ಎಂದು ಏರ್ ಲೈನ್ಸ್ ಹೇಳಿಕೆಯಲ್ಲಿ ತಿಳಿಸಿದೆ.
ಮಹಿಳಾ ಸಿಬ್ಬಂದಿಯೊಬ್ಬರನ್ನು ಪ್ರಯಾಣಿಕ ಅಸಭ್ಯವಾಗಿ ಮುಟ್ಟಿದ ಎಂದು ಸಿಬ್ಬಂದಿ ಆರೋಪಿಸಿದರೆ, ಇದು ಆಕಸ್ಮಿಕವಾಗಿ ನಡೆದ ಘಟನೆ ಎಂದು ಪ್ರಯಾಣಿಕರು ಹೇಳಿದ್ದಾರೆ. ತದನಂತರ ಪ್ರಯಾಣಿಕ ಕ್ಷಮೆಯಾಚಿಸಿ ಪತ್ರ ಬರೆದಿದ್ದಾರೆ. ಆದರೆ, ಮುಂದೆ ಯಾವುದೇ ಜಗಳ ನಡಯದಂತೆ ಆತನನ್ನು ವಿಮಾನದಿಂದ ಕೆಳಗಿಳಿಸಲಾಯಿತು ಎಂದು ಏರ್ ಲೈನ್ಸ್ ತಿಳಿಸಿದೆ.